ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ: ಕಲಬುರಗಿಯ ರಸ್ತೆಯಲ್ಲಿ ಜನಸಾಗರ

| Updated By: Ganapathi Sharma

Updated on: Jan 04, 2025 | 3:58 PM

ಕಲಬುರಗಿಯಲ್ಲಿ ಶನಿವಾರ ಬಿಜೆಪಿ ನಾಯಕರ, ಕಾರ್ಯಕರ್ತರ ಸಾಗರವೇ ನೆರೆದಿತ್ತು. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಲಬುರಗಿಯ ರಸ್ತೆಗಳಲ್ಲಿ ಜನಸಾಗರ ಕಂಡುಬಂತು.

ಕಲಬುರಗಿ, ಜನವರಿ 4: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಶನಿವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಕಲಬುರಗಿಯ ರಸ್ತೆಯಲ್ಲಿ ಜನಸಾಗರ ಕಂಡುಬಂತು. ಪ್ರತಿಭಟನಾನಿರತ ಬಿಜೆಪಿ ನಾಯಕರನ್ನು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಪೊಲೀಸರು ವಶಕ್ಕೆ ಪಡೆದರು.

ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ, ಉಮೇಶ್ ಜಾಧವ್, ಎನ್.ಮಹೇಶ್ ಮತ್ತಿತರರನ್ನು ಪೊಲೀಸ್ ವಶಕ್ಕೆ ಪಡೆದರು. ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದಾಗ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ನೇತೃತ್ವದಲ್ಲಿ ವಶಕ್ಕೆ ಪಡೆಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Jan 04, 2025 03:54 PM