ಸಿಎಂ ಸಿದ್ದರಾಮಯ್ಯ ಕಚೇರಿಯೊಳಗೆ ನುಗ್ಗಲು, ವಿಧಾನಸೌಧದ ದಕ್ಷಿಣ ದ್ವಾರಕ್ಕೆ ಬೀಗ ಹಾಕಲು ಯತ್ನಿಸಿದ ಅಶೋಕ್, ವಿಜಯೇಂದ್ರ
ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ವಿಧಾನಸೌಧದ ದಕ್ಷಿಣ ದ್ವಾರದ ಮೂಲಕ ಬಿಜೆಪಿ ನಾಯಕರು ಮುಖ್ಯಮಂತ್ರಿಗಳ ಕಚೇರಿಗೆ ನುಗ್ಗಲು ಯತ್ನಿಸಿದರು.
ಬೆಂಗಳೂರು, ಫೆಬ್ರವರಿ 07: ರಾಜ್ಯ ಕಾಂಗ್ರೆಸ್ ಸರ್ಕಾರದ (Congress Government) ವಿರುದ್ಧ ಬಿಜೆಪಿ (BJP) ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಮತ್ತು ವಿಪಕ್ಷ ನಾಯಕ ಆರ್ ಅಶೋಕ್ (R Ashok) ನೇತೃತ್ವದಲ್ಲಿ ವಿಧಾನಸೌಧದ (Vidhana Soudha) ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ವಿಧಾನಸೌಧದ ದಕ್ಷಿಣ ದ್ವಾರದ ಮೂಲಕ ಬಿಜೆಪಿ ನಾಯಕರು ಮುಖ್ಯಮಂತ್ರಿಗಳ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಬಿಜೆಪಿ ನಾಯಕರನ್ನು ತಡೆದರು. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್ ಅಶೋಕ್ ಪೊಲೀಸರನ್ನು ತಳ್ಳಿ ಮುಂದೆ ಹೋಗಿದರು. ಕೂಡಲೆ ಪೊಲೀಸರು ವಿಧಾನಸೌಧದ ದಕ್ಷಿಣ ದ್ವಾರದ ಬಾಗಿಲನ್ನು ಹಾಕಿದರು. ಆಗ ಬಿವೈ ವಿಜಯೇಂದ್ರ, ಆರ್ ಅಶೋಕ್ ಮತ್ತು ಶಾಸಕ ಮುನಿರತ್ನ ವಿಧಾನಸೌಧದ ದಕ್ಷಿಣ ದ್ವಾರಕ್ಕೆ ಬೀಗ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಬಿಜೆಪಿ ನಾಯಕರನ್ನು ತಡೆದರು. ಬಳಿಕ ಕೇಸರಿ ಕಲಿಗಳು ವಿಧಾನಸೌಧದ ದಕ್ಷಿಣ ದ್ವಾರದ ಮೆಟ್ಟಿಲುಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾನಿರತ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಸ್ನಲ್ಲಿ ಕರೆದೊಯ್ದರು. ಮತ್ತು ಇಂದಿನ ಪ್ರತಿಭಟನೆಯಲ್ಲಿ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಇನ್ನೂ ಅನೇಕ ನಾಯಕರು ಭಾಗಿಯಾಗಿದ್ದರು.