ಸಿಎಂ ಸಿದ್ದರಾಮಯ್ಯ ಕಚೇರಿಯೊಳಗೆ ನುಗ್ಗಲು, ವಿಧಾನಸೌಧದ ದಕ್ಷಿಣ ದ್ವಾರಕ್ಕೆ ಬೀಗ ಹಾಕಲು ಯತ್ನಿಸಿದ ಅಶೋಕ್​, ವಿಜಯೇಂದ್ರ

| Updated By: ವಿವೇಕ ಬಿರಾದಾರ

Updated on: Feb 07, 2024 | 1:50 PM

ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್ ಅಶೋಕ್​​ ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ವಿಧಾನಸೌಧದ ದಕ್ಷಿಣ ದ್ವಾರದ ಮೂಲಕ ಬಿಜೆಪಿ ನಾಯಕರು ಮುಖ್ಯಮಂತ್ರಿಗಳ ಕಚೇರಿಗೆ ನುಗ್ಗಲು ಯತ್ನಿಸಿದರು.

ಬೆಂಗಳೂರು, ಫೆಬ್ರವರಿ 07: ರಾಜ್ಯ ಕಾಂಗ್ರೆಸ್ ಸರ್ಕಾರದ (Congress Government) ವಿರುದ್ಧ ಬಿಜೆಪಿ (BJP) ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಮತ್ತು ವಿಪಕ್ಷ ನಾಯಕ ಆರ್ ಅಶೋಕ್ (R Ashok)​​ ನೇತೃತ್ವದಲ್ಲಿ ವಿಧಾನಸೌಧದ (Vidhana Soudha) ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ವಿಧಾನಸೌಧದ ದಕ್ಷಿಣ ದ್ವಾರದ ಮೂಲಕ ಬಿಜೆಪಿ ನಾಯಕರು ಮುಖ್ಯಮಂತ್ರಿಗಳ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಬಿಜೆಪಿ ನಾಯಕರನ್ನು ತಡೆದರು. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್​ ಅಶೋಕ್​ ಪೊಲೀಸರನ್ನು ತಳ್ಳಿ ಮುಂದೆ ಹೋಗಿದರು. ಕೂಡಲೆ ಪೊಲೀಸರು ವಿಧಾನಸೌಧದ ದಕ್ಷಿಣ ದ್ವಾರದ ಬಾಗಿಲನ್ನು ಹಾಕಿದರು. ಆಗ ಬಿವೈ ವಿಜಯೇಂದ್ರ, ಆರ್​ ಅಶೋಕ್ ಮತ್ತು ಶಾಸಕ ಮುನಿರತ್ನ ವಿಧಾನಸೌಧದ ದಕ್ಷಿಣ ದ್ವಾರಕ್ಕೆ ಬೀಗ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಬಿಜೆಪಿ ನಾಯಕರನ್ನು ತಡೆದರು. ಬಳಿಕ ಕೇಸರಿ ಕಲಿಗಳು ವಿಧಾನಸೌಧದ ದಕ್ಷಿಣ ದ್ವಾರದ ಮೆಟ್ಟಿಲುಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾನಿರತ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಸ್​ನಲ್ಲಿ ಕರೆದೊಯ್ದರು. ಮತ್ತು ಇಂದಿನ ಪ್ರತಿಭಟನೆಯಲ್ಲಿ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್​ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವರಾದ ಕೋಟಾ ಶ್ರೀನಿವಾಸ್​ ಪೂಜಾರಿ ಸೇರಿದಂತೆ ಇನ್ನೂ ಅನೇಕ ನಾಯಕರು ಭಾಗಿಯಾಗಿದ್ದರು.

Published on: Feb 07, 2024 01:48 PM