ಮೆಟ್ರೋ ದರ ಏರಿಕೆಗೆ ಕೇಂದ್ರವೇ ಹೊಣೆ ಎಂದ ಕಾಂಗ್ರೆಸ್: ಇತ್ತ ರಾಜ್ಯ ಸರ್ಕಾರದ ಬಿಜೆಪಿ ಪ್ರತಿಭಟನೆ
ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳ ಮಾಡಿರೋದು ರಾಜಕೀಯ ಕೆಸರೆರಚಾಟ ಶುರುವಾಗಿದೆ. ಮೆಟ್ರೋ ದರ ಹೆಚ್ಚಳ ಸಂಬಂಧ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರುಗಳ ನಡುವೆ ಆರೋಪ-ಪ್ರತ್ಯಾರೋಗಳು ಜೋರಾಗಿವೆ. ಕೇಂದ್ರ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ. ಮತ್ತೊಂದೆಡೆ ಬಿಜೆಪಿ ಸಹ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳ ಮಾಡಿದ್ದ ಸಿದ್ದರಾಮಯ್ಯ ಸರ್ಕಾರ ಎಂದು ವಿರೋಧಿಸಿ ಪ್ರತಿಭಟನೆ ನಡೆಸಿದೆ.
ಬೆಂಗಳೂರು, (ಫೆಬ್ರವರಿ 10): ಬೆಂಗಳೂರಿಗರ ಪಾಲಿಗೆ ಸಂಚಾರ ನಾಡಿಯಾಗಿರುವ ಮೆಟ್ರೋ ಟಿಕೆಟ್ ದರ ಏರಿಕೆಯಾಗಿದೆ. ಒನ್ ಟು ಡಬಲ್ ದರ ಏರಿಕೆ ಮೆಟ್ರೋ ಪ್ರಯಾಣಿಕರಿಗೆ ಶಾಕ್ ಕೊಟ್ಟಿದೆ. ಇದಿಗ ಇದೇ ವಿಚಾರ ಇಟ್ಕೊಂಡು ಬಿಜೆಪಿ ಪ್ರೊಟೆಸ್ಟ್ ಮಾಡಿದೆ. ಬಿಜೆಪಿ ಕಾರ್ಯಕರ್ತರು ಇಂದು (ಫೆಬ್ರವರಿ 10) ಮಾದಾವರ ಮೆಟ್ರೋ ನಿಲ್ದಾಣ, ಸಂಪಿಗೆ ರಸ್ತೆ ಮೆಟ್ರೋ ನಿಲ್ದಾಣ ಹಾಗೂ ಕೆಂಗೇರಿ ಮೆಟ್ರೋ ಸ್ಟೇಷನ್ ಎದುರು ಪ್ರತಿಭಟನೆ ಮಾಡಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.