ಮೆಟ್ರೋ ದರ ಏರಿಕೆಗೆ ಕೇಂದ್ರವೇ ಹೊಣೆ ಎಂದ ಕಾಂಗ್ರೆಸ್: ಇತ್ತ ರಾಜ್ಯ ಸರ್ಕಾರದ ಬಿಜೆಪಿ ಪ್ರತಿಭಟನೆ

Updated on: Feb 10, 2025 | 10:00 PM

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳ ಮಾಡಿರೋದು ರಾಜಕೀಯ ಕೆಸರೆರಚಾಟ ಶುರುವಾಗಿದೆ. ಮೆಟ್ರೋ ದರ ಹೆಚ್ಚಳ ಸಂಬಂಧ ಕಾಂಗ್ರೆಸ್​ ಮತ್ತು ಬಿಜೆಪಿ ನಾಯಕರುಗಳ ನಡುವೆ ಆರೋಪ-ಪ್ರತ್ಯಾರೋಗಳು ಜೋರಾಗಿವೆ. ಕೇಂದ್ರ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ. ಮತ್ತೊಂದೆಡೆ ಬಿಜೆಪಿ ಸಹ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳ ಮಾಡಿದ್ದ ಸಿದ್ದರಾಮಯ್ಯ ಸರ್ಕಾರ ಎಂದು ವಿರೋಧಿಸಿ ಪ್ರತಿಭಟನೆ ನಡೆಸಿದೆ.

ಬೆಂಗಳೂರು, (ಫೆಬ್ರವರಿ 10): ಬೆಂಗಳೂರಿಗರ ಪಾಲಿಗೆ ಸಂಚಾರ ನಾಡಿಯಾಗಿರುವ ಮೆಟ್ರೋ ಟಿಕೆಟ್ ದರ ಏರಿಕೆಯಾಗಿದೆ. ಒನ್ ಟು ಡಬಲ್ ದರ ಏರಿಕೆ ಮೆಟ್ರೋ ಪ್ರಯಾಣಿಕರಿಗೆ ಶಾಕ್ ಕೊಟ್ಟಿದೆ. ಇದಿಗ ಇದೇ ವಿಚಾರ ಇಟ್ಕೊಂಡು ಬಿಜೆಪಿ ಪ್ರೊಟೆಸ್ಟ್ ಮಾಡಿದೆ. ಬಿಜೆಪಿ ಕಾರ್ಯಕರ್ತರು ಇಂದು (ಫೆಬ್ರವರಿ 10) ಮಾದಾವರ ಮೆಟ್ರೋ ನಿಲ್ದಾಣ, ಸಂಪಿಗೆ ರಸ್ತೆ ಮೆಟ್ರೋ ನಿಲ್ದಾಣ ಹಾಗೂ ಕೆಂಗೇರಿ ಮೆಟ್ರೋ ಸ್ಟೇಷನ್ ಎದುರು ಪ್ರತಿಭಟನೆ ಮಾಡಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More