ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಸಂಗ್ರಾಮ: 3 ದಿಕ್ಕಿನಲ್ಲೂ ವಿಧಾನಸೌಧ ಮುತ್ತಿಗೆಗೆ ಪ್ಲಾನ್

Updated on: Aug 24, 2026 | 9:11 AM

ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ವಾಲ್ಮೀಕಿ ನಿಗಮ ಹಗರಣ ಸಂಬಂಧ ನಡೆಯುತ್ತಿರುವ ಈ ಹೋರಾಟ ನಿರ್ಣಾಯಕ ಹಂತ ತಲುಪಿದೆ. ಇಂದು ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಮೆರವಣಿಗೆ ಮೂಲಕ ಮುತ್ತಿಗೆ ಹಾಕಲು ಬಿಜೆಪಿ ಯೋಜಿಸಿದೆ. ಈ ಹೋರಾಟಕ್ಕೆ ಜೆಡಿಎಸ್ ಕೂಡ ಬೆಂಬಲ ವ್ಯಕ್ತಪಡಿಸಿದೆ.

ಬೆಂಗಳೂರು, ಆಗಸ್ಟ್ 24: ವಾಲ್ಮೀಕಿ ನಿಗಮ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ನಡೆಸಲು ಸಿದ್ಧವಾಗಿದೆ. ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಮುತ್ತಿಗೆ ಹಾಕಲು ಪಕ್ಷವು ಯೋಜನೆ ರೂಪಿಸಿದೆ. ಕಳೆದ ಒಂದು ವಾರದಿಂದ ಸದನದ ಒಳಗೆ ಮತ್ತು ಹೊರಗೆ ಈ ವಿಚಾರದಲ್ಲಿ ಗದ್ದಲ ಸೃಷ್ಟಿಸಿರುವ ಬಿಜೆಪಿ, ತನ್ನ ಹೋರಾಟವನ್ನು ನಿರ್ಣಾಯಕ ಹಂತಕ್ಕೆ ಕೊಂಡೊಯ್ಯಲು ಮುಂದಾಗಿದೆ. ಇಂದು ಸಾವಿರಾರು ಕಾರ್ಯಕರ್ತರೊಂದಿಗೆ ಬಿಜೆಪಿ ನಾಯಕರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಅಖಾಡ ಸಜ್ಜುಗೊಳಿಸಿದ್ದಾರೆ.

ಬಿಜೆಪಿ ರಾಜ್ಯ ನಾಯಕರಾದ ಆರ್. ಅಶೋಕ್, ಬಿ.ವೈ. ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ, ಎನ್. ರವಿಕುಮಾರ್, ಮತ್ತು ಪ್ರೀತಂ ಗೌಡ ನೇತೃತ್ವದಲ್ಲಿ ಮೂರು ಪ್ರತ್ಯೇಕ ತಂಡಗಳು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿವೆ. ಪ್ರತಿಭಟನೆಗೆ ಬೆಂಗಳೂರು ನಗರದ ಪ್ರತಿ ವಿಧಾನಸಭಾ ಕ್ಷೇತ್ರದಿಂದ ತಲಾ 200 ಕಾರ್ಯಕರ್ತರನ್ನು ಕರೆತರಲು ನಾಯಕರು ಸೂಚನೆ ನೀಡಿದ್ದಾರೆ. ಜೆಡಿಎಸ್ ಸಹ ಈ ಪ್ರತಿಭಟನೆಗೆ ಸಾಥ್ ನೀಡಲು ಮುಂದಾಗಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೊಂದು ದೊಡ್ಡ ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More