ಮಂಡ್ಯದಲ್ಲಿ ಮುಂದುವರೆದ ಕಾವೇರಿ ಕಿಚ್ಚು; ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ಅಪ್ಪಿಕೊ ಚಳುವಳಿ
Cauvery Water Dispute: ಕನ್ನಡಸೇನೆ ಕಾರ್ಯಕರ್ತರು ಇಂದು ಕೂಡ ಪ್ರತಿಭಟನೆ ನಡೆಸಿದ್ದು ನಮ್ಮದು ನಮ್ಮದು ಕಾವೇರಿ ನಮ್ಮದು ಎಂದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ತಲೆಯ ಮೇಲೆ ಚಪ್ಪಡಿ ಕಲ್ಲು ಇಟ್ಟುಕೊಂಡು ಮಂಡ್ಯದ ಸಂಜಯ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಗೂ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕುಳಿತು ಆಕ್ರೋಶ ಹೊರ ಹಾಕಿದ್ದಾರೆ.
ಮಂಡ್ಯ, ಸೆ.03: ಮಂಡ್ಯದಲ್ಲಿ(Mandya) ಕಾವೇರಿ ಕಿಚ್ಚು ಮುಂದುವರೆದಿದೆ. ಕನ್ನಡಸೇನೆ ಕಾರ್ಯಕರ್ತರು ಇಂದು ಕೂಡ ಪ್ರತಿಭಟನೆ ನಡೆಸಿದ್ದು ನಮ್ಮದು ನಮ್ಮದು ಕಾವೇರಿ ನಮ್ಮದು ಎಂದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ(Protest). ತಲೆಯ ಮೇಲೆ ಚಪ್ಪಡಿ ಕಲ್ಲು ಇಟ್ಟುಕೊಂಡು ಮಂಡ್ಯದ ಸಂಜಯ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಗೂ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕುಳಿತು ಆಕ್ರೋಶ ಹೊರ ಹಾಕಿದ್ದಾರೆ. ರೈತರ ತಲೆಯ ಮೇಲೆ ಚಪ್ಪಡಿ ಎಳೆದ ರಾಜ್ಯ ಸರ್ಕಾರ ಎಂದು ಬಾಯಿ ಬಡಿದುಕೊಂಡು ಜಿಲ್ಲಾ ಉಸ್ತುವಾರಿ ಸಚಿವ, ಸ್ಥಳೀಯ ಶಾಸಕರ ವಿರುದ್ಧ ಘೋಷಣೆ ಕೂಗಿದ್ದಾರೆ. ಇನ್ನು ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ಅಪ್ಪಿಕೊ ಚಳುವಳಿ ಮಾಡಿದ್ದಾರೆ. ಮಂಡ್ಯದ ಕಾವೇರಿ ನೀರಾವರಿ ನಿಗಮದ ಕಚೇರಿ ಬಳಿ ಇರುವ ಪ್ರತಿಮೆಯನ್ನು ಅಪ್ಪಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿ ಸಕ್ಕರಿನಗರಿ ಮಂಡ್ಯದಲ್ಲಿ ಅನ್ನದಾತರು ನಿನ್ನೆ ಆಕ್ರೋಶ ಹೊರ ಹಾಕಿದ್ದರು. ಕಳೆದ ಕೆಲ ದಿನಗಳಿಂದ ರೈತರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ನಿನ್ನೆ ಕೂಡ ರೈತರಿಗೆ ಬೆಂಬಲ ವ್ಯಕ್ತಪಡಿಸಿ ದಳಪತಿಗಳು ಕಾವೇರಿ ಕಿಚ್ಚಿನಲ್ಲಿ ಪಾಲ್ಗೊಂಡಿದ್ದರು. ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ರು.