ಬೆಂಗಳೂರು ಬಿಟ್ಟು ಮೈಸೂರಿನಲ್ಲೇ ಸಿದ್ದರಾಮಯ್ಯ ಮನೆ ಕಟ್ಟಿದ್ಯಾಕೆ? ಅಶೋಕ್ ಕೊಟ್ರು ಹೀಗೊಂದು ಕಾರಣ

Updated on: Dec 10, 2025 | 3:25 PM

ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೂ ಸಹ ಕಾಂಗ್ರೆಸ್​​​ನಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿ ಕಿತ್ತಾಟ ಪ್ರಸ್ತಾಪವಾಗಿದ್ದು, ವಿಪಕ್ಷ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗೆ ಟಾಂಗ್ ಕೊಡುವ ಕೆಲಸ ಮಾಡಿದ್ದಾರೆ. ಹಾಗೇ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದ್ದ ವೇಳೆ ಅಶೋಕ್ ವಾಯುಮಾಲಿನ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಸಿಎಂ ಸಿದ್ದರಾಮ್ಯಯನವರು ಅದಕ್ಕೆ ಬೆಂಗಳೂರು ಬಿಟ್ಟು ಮೈಸೂರಿನಲ್ಲೇ ಬಂಗ್ಲೆ ಕಟ್ಟಿಕೊಂಡಿದ್ದಾರೆ ಎಂದು ಕಾಲೆಳೆದರು.

ಬೆಳಗಾವಿ, (ಡಿಸೆಂಬರ್ 10): ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೂ ಸಹ ಕಾಂಗ್ರೆಸ್​​​ನಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿ ಕಿತ್ತಾಟ ಪ್ರಸ್ತಾಪವಾಗಿದ್ದು, ವಿಪಕ್ಷ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗೆ ಟಾಂಗ್ ಕೊಡುವ ಕೆಲಸ ಮಾಡಿದ್ದಾರೆ. ಹಾಗೇ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದ್ದ ವೇಳೆ ಅಶೋಕ್ ವಾಯುಮಾಲಿನ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಸಿಎಂ ಸಿದ್ದರಾಮ್ಯಯನವರು ಅದಕ್ಕೆ ಬೆಂಗಳೂರು ಬಿಟ್ಟು ಮೈಸೂರಿನಲ್ಲೇ ಬಂಗ್ಲೆ ಕಟ್ಟಿಕೊಂಡಿದ್ದಾರೆ ಎಂದು ಕಾಲೆಳೆದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ