ಕಾಂಗ್ರೆಸ್ ಆಯ್ತು ಈಗ ಬಿಜೆಪಿ ಸರದಿ: ದೆಹಲಿಗೆ ತೆರಳಿದ ಬಿಜೆಪಿ ಪ್ರತ್ಯೇಕ ಬಣ

Updated on: Dec 02, 2025 | 2:20 PM

ಕರ್ನಾಟಕ ಬಿಜೆಪಿಯ ಪ್ರತ್ಯೇಕ ಬಣ ದೆಹಲಿಗೆ ಪ್ರಯಾಣಿಸಿದ್ದು, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಸೇರಿ ಹಲವು ನಾಯಕರು ವರಿಷ್ಠರನ್ನು ಭೇಟಿಯಾಗಲಿದ್ದಾರೆ. ಸಂಘಟನಾತ್ಮಕ ವಿಷಯಗಳ ಚರ್ಚೆಗೆ ಅವಕಾಶ ಸಿಕ್ಕಿದ್ದು, ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆಯ ಕುರಿತು ಇದು ಇರುವುದಿಲ್ಲ ಎಂದು ಕುಮಾರ್ ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಡಿಸೆಂಬರ್ 2: ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತಾತ್ಕಾಲಿಕ ಬ್ರೇಕ್ ದೊರೆತ ಬೆನ್ನಲ್ಲೇ ಬಿಜೆಪಿಯ ಪ್ರತ್ಯೇಕ ಬಣವೊಂದರ ನಾಯಕರು ದೆಹಲಿಗೆ ಪ್ರಯಾಣಿಸಿದ್ದಾರೆ. ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಶ್ರೀಮಂತ್ ಪಾಟೀಲ್, ಬಿ.ವಿ.ನಾಯಕ್ ಮತ್ತು ಬಸನಗೌಡ ಪಾಟೀಲ್ ಸೇರಿದಂತೆ ಹಲವು ನಾಯಕರು ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

ಈ ಭೇಟಿಯ ಕುರಿತು ಪ್ರತಿಕ್ರಿಯಿಸಿರುವ ಕುಮಾರ್ ಬಂಗಾರಪ್ಪ, ಹೈಕಮಾಂಡ್ ಜತೆ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಕಾಲಾವಕಾಶ ಸಿಕ್ಕಿದೆ ಎಂದು ಹೇಳಿದ್ದಾರೆ. ಸದ್ಯಕ್ಕೆ ಅಗತ್ಯ ಇರುವ ವಿಷಯಗಳ ಬಗ್ಗೆ ಚರ್ಚಿಸಿ, ನಾಳೆ ಬೆಳಗ್ಗೆ ಹೆಚ್ಚಿನ ಮಾಹಿತಿ ನೀಡುವ ಭರವಸೆ ನೀಡಿದ್ದಾರೆ. ಈ ಭೇಟಿಯು ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆಗೆ ಸಂಬಂಧಿಸಿದ್ದಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ, ಸಂಘಟನಾತ್ಮಕ ವಿಷಯಗಳು, ವಿಶೇಷವಾಗಿ 2028 ರ ಚುನಾವಣೆಗೆ ಸಂಬಂಧಿಸಿದ ವಿಚಾರಗಳು ಚರ್ಚೆಯಾಗಲಿವೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ