ಬಿಜೆಪಿ ಎಲ್ಲಾ ಭಾಷೆಯನ್ನೂ ಗೌರವಿಸುತ್ತದೆ, ದಕ್ಷಿಣ ಭಾರತವನ್ನು ನಿರ್ಲಕ್ಷ್ಯಿಸುತ್ತಿಲ್ಲ; WITT ಶೃಂಗಸಭೆಯಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ
ಟಿವಿ9 ನೆಟ್ವರ್ಕ್ ಆಯೋಜಿಸಿರುವ WITT 2025 ಶೃಂಗಸಭೆಯಲ್ಲಿ ಮಾತನಾಡಿದ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್ ರೆಡ್ಡಿ ಅವರು ತಮಿಳುನಾಡು ಸಿಎಂ ಸ್ಟಾಲಿನ್ ರಾಜಕೀಯ ಲಾಭಕ್ಕಾಗಿ ಹಿಂದಿ ವಿರೋಧಿ ವಿಷಯವನ್ನು ಎತ್ತುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಎಲ್ಲಾ ಮಾತೃಭಾಷೆಗಳನ್ನು ಗೌರವಿಸುತ್ತದೆ ಮತ್ತು ದಕ್ಷಿಣ ಭಾರತವನ್ನು ನಿರ್ಲಕ್ಷಿಸುವುದಿಲ್ಲ ಎಂದು ಹೇಳಿದರು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಚುನಾವಣೆಗೆ ಮುನ್ನ ರಾಜಕೀಯ ಲಾಭಕ್ಕಾಗಿ ಹಿಂದಿ ಹೇರಿಕೆಯ ಆರೋಪವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನವದೆಹಲಿ, ಮಾರ್ಚ್ 29: ದೆಹಲಿಯಲ್ಲಿ ನಿನ್ನೆಯಿಂದ ನಡೆಯುತ್ತಿರುವ ಟಿವಿ9 ನೆಟ್‌ವರ್ಕ್‌ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ (WITT)ಯಲ್ಲಿ ಇಂದು ಮಾತನಾಡಿದ ತೆಲಂಗಾಣ ಬಿಜೆಪಿ ಅಧ್ಯಕ್ಷ, ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್ ರೆಡ್ಡಿ (Kishan Reddy) ಅವರು ಹಿಂದಿ ಭಾಷಾ ವಿಷಯದ ಸುತ್ತಲಿನ ವಿವಾದವನ್ನು ಉದ್ದೇಶಿಸಿ ಮಾತನಾಡಿದರು. ಈ ವಿಷಯದ ಕುರಿತು ಮಾತನಾಡಿದ ಅವರು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಚುನಾವಣೆಗೆ ಮುನ್ನ ರಾಜಕೀಯ ಲಾಭಕ್ಕಾಗಿ ಹಿಂದಿ ಹೇರಿಕೆಯ ಆರೋಪವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ದಕ್ಷಿಣ ಭಾರತದ ಮೇಲೆ ಹಿಂದಿ ಹೇರಿಕೆ ಮಾಡಲಾಗುತ್ತಿದೆಯೇ? ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಕಿಶನ್ ರೆಡ್ಡಿ, “ನಾನು ದಕ್ಷಿಣ ಭಾರತದವನು, ಆದರೆ ನಾನು ಹಿಂದಿ ಮಾತನಾಡಲು ಪ್ರಯತ್ನಿಸುತ್ತೇನೆ. ನಾನು ಹಿಂದಿ ಅಧ್ಯಯನ ಮಾಡಲಿಲ್ಲ, ಆದರೆ ಜನರೊಂದಿಗೆ ಸಂವಹನ ನಡೆಸುವ ಸಲುವಾಗಿ ನಾನು ಅದನ್ನು ಕಲಿತಿದ್ದೇನೆ” ಎಂದು ಕಿಶನ್ ರೆಡ್ಡಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಕಳೆದ 10 ವರ್ಷಗಳಲ್ಲಿ ತಮಿಳುನಾಡು, ಕರ್ನಾಟಕ ಅಥವಾ ಕೇರಳದಲ್ಲಿ ಯಾವುದೇ ವ್ಯಕ್ತಿಯನ್ನು ಹಿಂದಿ ಕಲಿಯುವಂತೆ ಒತ್ತಾಯಿಸಿಲ್ಲ ಎಂದು ಅವರು ಹೇಳಿದರು.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ

