ಸುರಂಗ ಮಾರ್ಗ ವಿರುದ್ಧ ಸ್ಯಾಂಕಿ ಕೆರೆ ಬಳಿ ವಿಪಕ್ಷ ನಾಯಕ ಅಶೋಕ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ
ಸ್ಯಾಂಕಿ ಕೆರೆ ಉಳಿಸಿ, ಬೆಂಗಳೂರು ರಕ್ಷಿಸಿ ಎಂಬ ಘೋಷಣೆಯೊಂದಿಗೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸ್ಯಾಂಕಿ ಕೆರೆ ಬಳಿ ಪ್ರತಿಭಟನೆ ನಡೆಸಿದರು. ಬೆಂಗಳೂರು ಸುರಂಗ ಮಾರ್ಗ ಯೋಜನೆ ವಿರುದ್ಧ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಕೆರೆಗೆ ಆಗುವ ಹಾನಿಯ ಕುರಿತು ಕಳವಳ ವ್ಯಕ್ತಪಡಿಸಲಾಯಿತು.
ಬೆಂಗಳೂರು, ನವೆಂಬರ್ 15: ಸ್ಯಾಂಕಿ ಕೆರೆ ಉಳಿಸಿ, ಬೆಂಗಳೂರು ರಕ್ಷಿಸಿ ಎಂಬ ಹಕ್ಕೊತ್ತಾಯದೊಂದಿಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬೆಂಗಳೂರಿನ ಸ್ಯಾಂಕಿ ಕೆರೆ ಬಳಿ ಭಾರಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಸರ್ಕಾರದ ಬೆಂಗಳೂರು ಸುರಂಗ ಮಾರ್ಗ ಯೋಜನೆಯ ವಿರುದ್ಧ ಈ ಪ್ರತಿಭಟನೆಯನ್ನು ಆಯೋಜಿಸಲಾಗಿದ್ದು, ಉದ್ದೇಶಿತ ಸುರಂಗ ರಸ್ತೆ ಯೋಜನೆಯು ಐತಿಹಾಸಿಕ ಸ್ಯಾಂಕಿ ಕೆರೆಗೆ ಹಾನಿ ಮಾಡಬಹುದು ಎಂಬ ಆತಂಕವನ್ನು ಪ್ರತಿಭಟನಾಕಾರರು ವ್ಯಕ್ತಪಡಿಸಿದ್ದಾರೆ. ಸುರಂಗ ರಸ್ತೆಯ ನಿರ್ಮಾಣದಿಂದ ಬೆಂಗಳೂರಿನ ಜೀವನಾಡಿಯಾಗಿರುವ ಸ್ಯಾಂಕಿ ಕೆರೆಯ ಅಸ್ತಿತ್ವಕ್ಕೆ ಅಪಾಯ ಬರಲಿದೆ. ರಾಜ್ಯ ಸರ್ಕಾರವು ಈ ಯೋಜನೆಯನ್ನು ಕೈಬಿಡಬೇಕು ಮತ್ತು ಕೆರೆಯ ಪರಿಸರ ಸಮತೋಲನವನ್ನು ಕಾಪಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
Latest Videos
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್ನಲ್ಲಿ ಚಿನ್ನದಂಗಡಿ ದರೋಡೆ
ಮನ್ ಕಿ ಬಾತ್ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

