ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ: ವಿಕಾಸಸೌಧದ ಗೇಟ್ ಬಳಿ ಭಾರಿ ಹೈಡ್ರಾಮಾ
BJP Protest: ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದೆ. ಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಮುತ್ತಿಗೆ ಯತ್ನ ನಡೆದಿದ್ದು, ನಾಯಕರನ್ನು ಪೊಲೀಸರು ವಶಕ್ಕೆ ಪಡೆದ ಪ್ರಸಂಗ ನಡೆದಿದೆ.
ಬೆಂಗಳೂರು, ಆಗಸ್ಟ್ 24: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದ್ದು, ವಿಕಾಸಸೌಧದ ಗೇಟ್ ಬಳಿ ಭಾರಿ ಹೈಡ್ರಾಮಾವೇ ನಡೆದಿದೆ. ವಿಧಾನಸೌಧಕ್ಕೆ ಒಳನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟಿದ್ದು, ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಪರಿಷತ್ ಸದಸ್ಯರಾದ ಸಿಟಿ ರವಿ ಮತ್ತು ರವಿಕುಮಾರ್ ಸೇರಿ ಹಲವರನ್ನು ವಶಕ್ಕೆ ಪಡೆಯಲಾಗಿದೆ. ವಿಕಾಸಸೌಧ ಗೇಟ್ ಮುಂಭಾಗದ ರಸ್ತೆಯಲ್ಲಿಯೇ ಕುಳಿತು ಬಿಜೆಪಿಗರು ಪ್ರತಿಭಟನೆ ನಡೆಸಿದ್ದು, ವಶಕ್ಕೆ ಪಡೆದ ಬಿಜೆಪಿಗರನ್ನು ಪೊಲೀಸರು ಹೈಗ್ರೌಂಡ್ಸ್ ಠಾಣೆಗೆ ಕರೆದೊಯ್ದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

