ನಿರಾಶೆ ಬದಿಗೊತ್ತಿರುವ ಸಿಟಿ ರವಿ ಮನೆಯಲ್ಲಿ ಮಧ್ಯಾಹ್ನದ ಭೋಜನ ಸವಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಇವತ್ತು ವಿಜಯೇಂದ್ರ ಚಿಕ್ಕಮಗಳೂರಿಗೆ ಪ್ರವಾಸ ಬೆಳೆಸಿ ಬಸವನಹಳ್ಳಿ ರಸ್ತೆಯಲ್ಲಿರುವ ರವಿಯವರ ಮನೆಗೆ ಭೇಟಿ ನೀಡಿದರು. ಯಡಿಯೂರಪ್ಪರ ಮಗನನ್ನು ರವಿ ಮತ್ತು ಮನೆಯವರು ಬಹಳ ಆತ್ಮೀಯವಾಗಿ ಮತ್ತು ಸಾಂಪ್ರದಾಯಿಕ ಶೈಲಿಯಲ್ಲಿ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ಬರಮಾಡಿಕೊಂಡರು. ಮಧ್ಯಾಹ್ನದ ಊಟವನ್ನು ರವಿ ಮನೆಯಲ್ಲೇ ಏರ್ಪಡಿಸಲಾಗಿತ್ತು.

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Jan 31, 2024 | 5:49 PM

ಚಿಕ್ಕಮಗಳೂರು: ನಿಮಗೆ ನೆನಪಿರಬಹುದು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹೈಕಮಾಂಡ್ ಬಿವೈ ವಿಜಯೇಂದ್ರರನ್ನು (BY Vijayendra) ನೇಮಕ ಮಾಡಿದಾಗ ರಾಜಕೀಯದಲ್ಲಿ ಅವರಿಗಿಂತ ಹಿರಿಯರಾಗಿರುವ ಮಾಜಿ ಶಾಸಕ ಸಿಟಿ ರವಿಗೆ (CT Ravi) ನಿರಾಶರಾಗಿದ್ದರು. ಅವರ ಮಾತಿನಲ್ಲಿ ಅಗ ಬೇಸರ ಸ್ಪಷ್ಟವಾಗಿ ಕಾಣುತಿತ್ತು ಮತ್ತು ಒಂದೆರಡು ಬಾರಿ ಅವರು ವೈರಾಗ್ಯದ ಮಾತುಗಳನ್ನೂ ಆಡಿದ್ದರು. ಅದರೆ, ಈಗ ಅದೆಲ್ಲ ಮಾಯವಾದಂತಿದೆ. ಇವತ್ತು ವಿಜಯೇಂದ್ರ ಚಿಕ್ಕಮಗಳೂರಿಗೆ (Chikmagalur) ಪ್ರವಾಸ ಬೆಳೆಸಿ ಬಸವನಹಳ್ಳಿ ರಸ್ತೆಯಲ್ಲಿರುವ ರವಿಯವರ ಮನೆಗೆ ಭೇಟಿ ನೀಡಿದರು. ಯಡಿಯೂರಪ್ಪರ ಮಗನನ್ನು ರವಿ ಮತ್ತು ಮನೆಯವರು ಬಹಳ ಆತ್ಮೀಯವಾಗಿ ಮತ್ತು ಸಾಂಪ್ರದಾಯಿಕ ಶೈಲಿಯಲ್ಲಿ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ಬರಮಾಡಿಕೊಂಡರು. ಮಧ್ಯಾಹ್ನದ ಊಟವನ್ನು ರವಿ ಮನೆಯಲ್ಲೇ ಏರ್ಪಡಿಸಲಾಗಿತ್ತು. ವಿಜೆಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ, ರವಿ ಮತ್ತು ಕೆಲ ಸ್ಥಳೀಯ ಬಿಜೆಪಿ ನಾಯಕರು ಒಟ್ಟಿಗೆ ಕೂತು ಊಟ ಮಾಡುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಮನೆಯ ಹೆಣ್ಣಮಕ್ಕಳು ಲವಲವಿಕೆಯಿಂದ ಓಡಾಡುತ್ತಾ ಅತಿಥಿಗಳಿಗೆ ಊಟ ಬಡಿಸುತ್ತಿರುವುದನ್ನು ಸಹ ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ