Karnataka Assembly Polls 2023: ಬಿಜೆಪಿಯ ಹಲವು ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಯನ್ನು ಅಲ್ಲಗಳೆಯಲಿಲ್ಲ ಸಿಎಂ ಬೊಮ್ಮಾಯಿ!

Edited By: ಅರುಣ್​ ಕುಮಾರ್​ ಬೆಳ್ಳಿ

Updated on: Apr 08, 2023 | 12:38 PM

ಪ್ರತಿಕ್ಷೇತ್ರದ ಆಂತರಿಕ ಸಮೀಕ್ಷೆಯ ಆಧಾರದಲ್ಲಿ ಟಿಕೆಟ್ ಹಂಚಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ದೆಹಲಿ: ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಹಂಚುವ (ticket distribution) ಪ್ರಕ್ರಿಯೆಯಲ್ಲಿ ಹಲವಾರು ಬಿಜೆಪಿ ಶಾಸಕರಿಗೆ ಆಘಾತ ಕಾದಿದೆ ಅಂತ ಹೇಳಲಾಗುತ್ತಿದೆ. ನಾಳೆ ರಾಜಧಾನಿಯಲ್ಲಿ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ (Assembly polls) ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನೂ ಅಂತಿಮಗೊಳಿಸುವ ನಿರೀಕ್ಷೆ ಇದೆ. ಇಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಮಾಧ್ಯಮ ಪ್ರತಿನಿಧಿಗಳು ಹಾಲಿ ಶಾಸಕರಿಗೆ ಕೊಕ್ ನೀಡುವ ಬಗ್ಗೆ ಕೇಳಿದಾಗ ಅವರು ವಿಷಯವನ್ನು ಬೇರೆ ರೀತಿಯಲ್ಲಿ ಹೇಳುವ ಪ್ರಯತ್ನ ಮಾಡಿದರು. ಪ್ರತಿಕ್ಷೇತ್ರದ ಆಂತರಿಕ ಸಮೀಕ್ಷೆಯ ಆಧಾರದಲ್ಲಿ ಟಿಕೆಟ್ ಹಂಚಲಾಗುವುದು ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
TV9 Web

TV9 Kannada

Read More