ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಬಿಜೆಪಿ ಕರ್ನಾಟಕ ಘಟಕವು ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ ಒಂದು ವಾರದ ‘ಧರ್ಮದ ಉಳಿವಿಗಾಗಿ ಧರ್ಮಯುದ್ಧ’ ಪ್ರತಿಭಟನಾ ಸಪ್ತಾಹವನ್ನು ಘೋಷಿಸಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಹೋರಾಟದ ಯೋಜನೆಯನ್ನು ರೂಪಿಸಲಾಗಿದೆ.
ಬೆಂಗಳೂರು, ಆಗಸ್ಟ್ 21: ಧರ್ಮಸ್ಥಳ ಪ್ರಕರಣ ಸಂಬಂಧ ಕ್ಷೇತ್ರದ ಪರವಾಗಿ ಬಿಜೆಪಿ ಹೋರಾಟಕ್ಕೆ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬೃಹತ್ ಪ್ರತಿಭಟನೆಗೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ರೂಪುರೇಷೆ ಸಿದ್ಧಪಡಿಸಲಾಗಿದೆ. ‘ಧರ್ಮದ ಉಳಿವಿಗಾಗಿ ಧರ್ಮಯುದ್ಧ’ ಹೆಸರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಯಲಿದೆ. ಮೊದಲು ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಬಳಿಕ ಪ್ರತಿ ಕ್ಷೇತ್ರದ ನಾಯಕರು, ಕಾರ್ಯಕರ್ತರಿಂದ ಧರ್ಮಸ್ಥಳ ಚಲೋ ನಡೆಯಲಿದೆ. ಸಾವಿರಾರು ಕಾರ್ಯಕರ್ತರ ಜೊತೆಗೆ ಧರ್ಮಸ್ಥಳಕ್ಕೆ ತೆರಳಲು ಸೂಚನೆ ಬಿಜೆಪಿ ನಾಯಕರು ಸೂಚನೆ ನೀಡಿದ್ದಾರೆ.