AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ’! ಮಂಗಳೂರಿನಲ್ಲಿ ಬಿಜೆಪಿಗರ ಘೋಷಣೆ, ಚುರುಮುರಿ ತಯಾರಿಸಿ ಹಂಚಿದ ಶಾಸಕ ಕಾಮತ್

‘ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ’! ಮಂಗಳೂರಿನಲ್ಲಿ ಬಿಜೆಪಿಗರ ಘೋಷಣೆ, ಚುರುಮುರಿ ತಯಾರಿಸಿ ಹಂಚಿದ ಶಾಸಕ ಕಾಮತ್

ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: May 04, 2026 | 2:22 PM

Share

ಮೂರು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿಯ ಭರ್ಜರಿ ಮುನ್ನಡೆಯನ್ನು ಮಂಗಳೂರಿನಲ್ಲಿ ಸಂಭ್ರಮಿಸಲಾಯಿತು. ಶಾಸಕ ವೇದವ್ಯಾಸ್ ಕಾಮತ್ ಸ್ವತಃ ಚುರುಮುರಿ ತಯಾರಿಸಿ ಹಂಚಿದರೆ, ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಅಂಗಡಿಯೊಂದರಲ್ಲಿ ಚುರುಮುರಿ ಸವಿದಿದ್ದು ಬಹಳಷ್ಟು ಸುದ್ದಿಯಾಗಿತ್ತು.

ಮಂಗಳೂರು, ಮೇ 4: ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಮತ್ತು ಬಹುಮತದತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯಿಂದ ಅದ್ಧೂರಿ ಸಂಭ್ರಮಾಚರಣೆ ನಡೆಸಲಾಯಿತು. ನಗರದ ಪಿವಿಎಸ್ ಬಳಿ ಇರುವ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಲಡ್ಡು ಹಂಚಿ ವಿಜಯೋತ್ಸವ ಆಚರಿಸಿದರು.

ಈ ಸಂಭ್ರಮಾಚರಣೆಯ ವಿಶೇಷ ಆಕರ್ಷಣೆಯೆಂದರೆ, ಶಾಸಕ ವೇದವ್ಯಾಸ್ ಕಾಮತ್ ಅವರು ಸ್ವತಃ ಚುರುಮುರಿ ತಯಾರಿಸಿ ಕಾರ್ಯಕರ್ತರಿಗೆ ಮತ್ತು ಸಾರ್ವಜನಿಕರಿಗೆ ಹಂಚಿದ್ದು. ಬಂಗಾಳದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು ಚುರುಮುರಿ ಸವಿದಿದ್ದನ್ನು ಸ್ಮರಿಸುತ್ತಾ ಶಾಸಕರು ಈ ವಿಭಿನ್ನ ರೀತಿಯ ಸಂಭ್ರಮಾಚರಣೆ ಮಾಡಿದರು. ಇದೇ ವೇಳೆ, ‘ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ’ ಎಂಬ ಘೋಷಣೆಗಳು ಮಾರ್ದನಿಸಿದವು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಪ್ರಮುಖ ನಾಯಕರು ಪಾಲ್ಗೊಂಡಿದ್ದರು. ಮಹಿಳಾ ಕಾರ್ಯಕರ್ತರು ಜಯಘೋಷಗಳನ್ನು ಕೂಗುತ್ತಾ ಹೆಜ್ಜೆ ಹಾಕುವ ಮೂಲಕ ಸಂಭ್ರಮ ಹಂಚಿಕೊಂಡರು.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us