ಬೈಲಹೊಂಗಲ ಪಟ್ಟಣದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ; ಗಮನ ಸೆಳೆದ ಲಂಬಾಣಿ ನೃತ್ಯ

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 04, 2023 | 1:29 PM

ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ವಿಜಯ ಸಂಕಲ್ಪ ಯಾತ್ರೆ ಆರಂಭಿಸಿದರು. ಇದೇ ವೇಳೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಬಸ್ ಮುಂದೆ ಲಂಬಾಣಿ ನೃತ್ಯ ಎಲ್ಲರ ಗಮನ ಸೆಳೆಯಿತು.

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆರಂಭಿಸಿದ್ದು, ಹುಬ್ಬಳ್ಳಿಯಿಂದ ಬೈಲಹೊಂಗಲ ಕೆಸಿಇ ಮೈದಾನದ ಹೆಲಿಪ್ಯಾಡ್‌ಗೆ ಆಗಮಿಸಿದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ವಿಜಯ ಸಂಕಲ್ಪ ಯಾತ್ರೆ ಆರಂಭಿಸಿದರು. ಇದೇ ವೇಳೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಬಸ್ ಮುಂದೆ ಲಂಬಾಣಿ ನೃತ್ಯ ಎಲ್ಲರ ಗಮನ ಸೆಳೆಯಿತು. ಇನ್ನು ಈ ಯಾತ್ರೆಯು ಬೈಲಹೊಂಗಲ ಪಟ್ಟಣದಲ್ಲಿ ಎರಡೂವರೆ ಕಿಮೀ ನಡೆಯಲಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 04, 2023 01:26 PM