Karnataka Assembly Polls; ರಸ್ತೆ, ಬೀದಿಗಳು ಸಾಕಾಗಲಾರವು, ಪ್ರಧಾನಿ ಮೋದಿ ರೋಡ್ ಶೋಗೆ ಅಷ್ಟು ಜನ ಸೇರಲಿದ್ದಾರೆ: ಕೆ ಗೋಪಾಲಯ್ಯ

Updated on: May 06, 2023 | 10:26 AM

ಈ ಬಾರಿ ನಗರದ 28 ವಿಧಾನಸಭಾ ಕ್ಷೇತ್ರಗಳ ಪೈಕಿ 20ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಗೋಪಾಲಯ್ಯ ಹೇಳುತ್ತಾರೆ

ಬೆಂಗಳೂರು: ನಗರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ಅದ್ದೂರಿ ರೋಡ್ ಶೋ (roadshow) ಆರಂಭವಾಗಿದೆ. ಅವರು ಹಾದಹೋಗುವ ಮಾರ್ಗಗಳಲ್ಲಿ ಜನ ಈಗಾಗಲೇ ಜಮಾಯಿಸಿ ಕಾತುರದಿಂದ ಕಾಯುತ್ತಿದ್ದಾರೆ. ಪ್ರಧಾನಿಯವರ ರೋಡ್ ಶೋ ಇಂದು ರಾಜಾಜಿನಗರ ಮತ್ತು ಮಹಾಲಕ್ಷ್ಮಿ ಲೇಔಟ್ ಮೂಲಕ ಕೂಡ ಹಾದು ಹೋಗಲಿರುವುದರಿಂದ ಈ ಭಾಗದ ಶಾಸಕ ಕೆ ಗೋಪಾಲಯ್ಯ (K Gopalaiah) ಬಹಳ ಉತ್ಸುಕರಾಗಿದ್ದಾರೆ. ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ. ರಸ್ತೆಗಳಲ್ಲಿ ಸ್ಥಳ ಸಾಕಾಗಲಾರದು, ಅಷ್ಟು ಪ್ರಮಾಣದಲ್ಲಿ ಜನ ಸೇರಲಿದ್ದಾರೆ ಎಂದು ಹೇಳುವ ಗೋಪಾಲಯ್ಯ ಈ ಬಾರಿ ನಗರದ 28 ವಿಧಾನಸಭಾ ಕ್ಷೇತ್ರಗಳ ಪೈಕಿ 20ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More