AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls; ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ: ಬಿವೈ ವಿಜಯೇಂದ್ರ

Karnataka Assembly Polls; ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ: ಬಿವೈ ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 14, 2023 | 5:20 PM

Share

ಪಕ್ಷದ ಹಿರಿಯ ನಾಯಕರು ಏನೇ ಮಾಡಿದರೂ ಪಕ್ಷದ ಹಿತದೃಷ್ಟಿಯಿಂದ ಮಾಡಿರುತ್ತಾರೆ. ಅಸಮಾಧಾನಗೊಂಡಿರುವ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದು ವಿಜಯೇಂದ್ರ ಹೇಳಿದರು.

ಮಂಡ್ಯ: ಬಿಜೆಪಿಯಿಂದ ಟಿಕೆಟ್ ಘೋಷಣೆಯಾಗುವರೆಗೆ ಕಾಂಗ್ರೆಸ್ ನಾಯಕರ ಜೊತೆ ನಿಕಟ ಸಂಪರ್ಕದಲ್ಲಿದ್ದ ಸಚಿವ ಕೆಸಿ ನಾರಾಯಣಗೌಡ (KC Narayana Gowda) ಪರ ಕೆ ಅರ್ ಪೇಟೆಯಲ್ಲಿ ಶಿಕಾರಿಪುರದ ಬಿಜೆಪಿ ಅಭ್ಯರ್ಥಿ ಮತ್ತು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಭರ್ಜರಿ ಪ್ರಚಾರ ನಡೆಸಿದರು. ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಈ ಬಾರಿ ಬಿಜೆಪಿ ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ (clear majority) ಅಧಿಕಾರಕ್ಕೆ ಬರಲಿದೆ ಎಂದು ಅವರು ಹೇಳಿದರು. ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಹಲವಾರು ಬಿಜೆಪಿ ನಾಯಕರು ಪಕ್ಷ ಬಿಟ್ಟು ಹೋಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ವಿಜಯೇಂದ್ರ, ಪಕ್ಷದ ಹಿರಿಯ ನಾಯಕರು ಏನೇ ಮಾಡಿದರೂ ಪಕ್ಷದ ಹಿತದೃಷ್ಟಿಯಿಂದ ಮಾಡಿರುತ್ತಾರೆ. ಅಸಮಾಧಾನಗೊಂಡಿರುವ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ