Karnataka Assembly Polls; ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ 35 ಕ್ಷೇತ್ರಗಳನ್ನು ಗೆಲ್ಲಲಿದೆ: ಬಿ ಶ್ರೀರಾಮುಲು
ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಶ್ರೀರಾಮುಲು ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಬಳ್ಳಾರಿ: ಸಾರಿಗೆ ಸಚಿವ ಬಿ ಶ್ರೀರಾಮುಲು (B Sriramulu) ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣ (Ballari Rural) ಕ್ಷೇತ್ರದಿಂದ ವಿಜಯ ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು. ಬಳ್ಳಾರಿ ನಗರದಲ್ಲಿ ಇಂದು ಮುಸ್ಲಿಂ ಸಮುದಾಯದ ಜನರೊಂದಿಗೆ ರಂಜಾನ್ (Ramazan) ಹಬ್ಬದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶ್ರೀರಾಮುಲು, ಮುಸಲ್ಮಾನ ಬಾಂಧವರಿಗೆ ಹಬ್ಬದ ಶುಭಾಷಯಗಳನ್ನು ತಿಳಿಸಿ, 30 ದಿನಗಳ ಕಾಲ ಉಪವಾಸ ಆಚರಿಸಿ ಇಂದು ಹಬ್ಬ ಆಚರಿಸುತ್ತಾ ಸಂಭ್ರಮದಲ್ಲಿರುವ ಮುಸಲ್ಮಾನ ಬಾಂಧವರು ತಾವು ಮಾಡಿಕೊಂಡ ಹರಕೆಗಳನ್ನು ಅಲ್ಲಾಹು ಈಡೇರಿಸಲಿ ಎಂದು ಹಾರೈಸಿದರು. ನಂತರ ಚುನಾವಣೆಯ ಬಗ್ಗೆ ಮಾತಾಡಿದ ಸಚಿವರು ಕಲ್ಯಾಣ ಕರ್ನಾಟಕ (Kalyana Karnataka) ಭಾಗದಲ್ಲಿ ಬಿಜೆಪಿ ಕನಿಷ್ಟ 35 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ