ಎಲ್ಲ ಕ್ಷೇತ್ರಗಳಲ್ಲಿ ಎನ್ ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸುವ ಗುರಿಯೊಂದಿಗೆ ಬಿಜೆಪಿ ಕೆಲಸ ಮಾಡಲಿದೆ: ಸಿಟಿ ರವಿ, ಬಿಜೆಪಿ ನಾಯಕ

|

Updated on: Jan 10, 2024 | 1:31 PM

ಇಂದು ಕಾರ್ಯಕರ್ತರ ಸಭೆ ಕರೆದಿರುವುದು ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವುದಕ್ಕಲ್ಲ, ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ತಂತ್ರಗಾರಿಕೆ ರೂಪಿಸುವ, ಯೋಜನೆ ಸಿದ್ದಪಡಿಸುವ ನಿಟ್ಟಿನಲ್ಲಿ ಫೀಡ್ ಬ್ಯಾಕ್ ಪಡೆಯಲು ಸಭೆ ಕರೆಯಲಾಗಿದೆ ಎಂದು ರವಿ ಹೇಳಿದರು. ಬಿಜೆಪಿಯಲ್ಲಿ ಟಿಕೆಟ್ ಯಾರಿಗೆ ನೀಡಬೇಕು ಅಂತ ನಿರ್ಣಯಿಸುವ ಅಧಿಕಾರ ಕೇವಲ ಪಕ್ಷದ ಸಂಸದೀಯ ಸಮಿತಿಗೆ ಮಾತ್ರ ಇರುತ್ತದೆ ಎಂದು ಮಾಜಿ ಸಚಿವ ಹೇಳಿದರು.

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಸ್ಪರ್ಧಿಸುತ್ತಾರಾ ಅಥವಾ ಸುಮಲತಾ ಅಂಬರೀಶ್ (Sumalatha Ambareesh) ಎನ್ ಡಿಎ ಅಭ್ಯರ್ಥಿಯಾಗುತ್ತಾರಾ ಅಂತ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಮಾಜಿ ಶಾಸಕ ಮತ್ತು ಹಿರಿಯ ಬಿಜೆಪಿ ನಾಯಕ ಸಿಟಿ ರವಿ (CT Ravi) ಸ್ಪಷ್ಟವಾದ ಉತ್ತರ ನೀಡಲಿಲ್ಲ. ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲು ನಗರದ ಬಿಜೆಪಿ ಕಚೇರಿಗೆ ಆಗಮಿಸಿದ್ದ ಅವರು, ಯಾರು ಅಭ್ಯರ್ಥಿಯಾಗಲಿದ್ದಾರೆ ಅಂತ ಈಗಲೇ ಹೇಳಕ್ಕಾಗಲ್ಲ, ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಎನ್ ಡಿಎ ಅಬ್ಯರ್ಥಿಗಳು ಗೆಲ್ಲಬೇಕೆನ್ನುವ ಗುರಿ ಹೊಂದಿರುವ ಬಿಜೆಪಿ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ ಎಂದು ಹೇಳಿದರು. ಇಂದು ಕಾರ್ಯಕರ್ತರ ಸಭೆ ಕರೆದಿರುವುದು ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವುದಕ್ಕಲ್ಲ, ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ತಂತ್ರಗಾರಿಕೆ ರೂಪಿಸುವ, ಯೋಜನೆ ಸಿದ್ದಪಡಿಸುವ ನಿಟ್ಟಿನಲ್ಲಿ ಫೀಡ್ ಬ್ಯಾಕ್ ಪಡೆಯಲು ಸಭೆ ಕರೆಯಲಾಗಿದೆ ಎಂದು ರವಿ ಹೇಳಿದರು. ಬಿಜೆಪಿಯಲ್ಲಿ ಟಿಕೆಟ್ ಯಾರಿಗೆ ನೀಡಬೇಕು ಅಂತ ನಿರ್ಣಯಿಸುವ ಅಧಿಕಾರ ಕೇವಲ ಪಕ್ಷದ ಸಂಸದೀಯ ಸಮಿತಿಗೆ ಮಾತ್ರ ಇರುತ್ತದೆ ಎಂದು ಮಾಜಿ ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ