Karnataka Assembly Polls; ಬಿಜೆಪಿ ಮ್ಯಾಜಿಕ್ ನಂಬರ್ ದಾಟುತ್ತದೆ, ಜೆಡಿಎಸ್ ಜೊತೆ ಮೈತ್ರಿಯ ಪ್ರಶ್ನೆಯೇ ಉದ್ಭವಿಸುವುದಿಲ್ಲ: ಬಸವರಾಜ ಬೊಮ್ಮಾಯಿ, ಸಿಎಮ್
ಕಾಂಗ್ರೆಸ್ ಪಕ್ಷದ ನಾಯಕರು ಜೆಡಿಎಸ್ ಧುರೀಣರೊಂದಿಗೆ ಮಾತುಕತೆಯಲ್ಲಿ ನಿರತರಾಗಿರುವುದು ತಮಗೆ ಸಂಬಂಧಿಸದ ವಿಷಯ ಎಂದು ಬೊಮ್ಮಾಯಿ ಹೇಳಿದರು.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುವ ವಿಶ್ವಾಸವಿದೆ. ಇಂದು ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು ಅತಂತ್ರ ವಿಧಾನ ಸಭೆಯಂಥ ಸನ್ನಿವೇಶವೇ ಸೃಷ್ಟಿಯಾಗುವುದಿಲ್ಲ, ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುತ್ತದೆ, ಇದು ರಾಜ್ಯದ ನಾಯಕರಿಗೆ ಗೊತ್ತಿರುವಂತೆ ಕೇಂದ್ರದ ನಾಯಕರಿಗೂ ಗೊತ್ತಿದೆ ಎಂದು ಹೇಳಿದರು. ತಮ್ಮ ಪಕ್ಷ ಮ್ಯಾಜಿಕ್ ನಂಬರ್ (magic number) ದಾಟುವುದರಿಂದ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿಮಾಡಿಕೊಳ್ಳುವ (alliance) ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಕಾಂಗ್ರೆಸ್ ಪಕ್ಷದ ನಾಯಕರು ಜೆಡಿಎಸ್ ಧುರೀಣರೊಂದಿಗೆ ಮಾತುಕತೆಯಲ್ಲಿ ನಿರತರಾಗಿರುವುದು ತಮಗೆ ಸಂಬಂಧಿಸದ ವಿಷಯ ಎಂದು ಬೊಮ್ಮಾಯಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

