ತಿರುವನಂತಪುರಂ ಕಾರ್ಪೊರೇಷನ್ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಿರುವನಂತಪುರಂ ಪುರಸಭೆಯ 101 ವಾರ್ಡ್‌ಗಳಲ್ಲಿ ಎನ್‌ಡಿಎ 50 ಸ್ಥಾನಗಳನ್ನು ಗೆದ್ದಿದೆ. ಆಡಳಿತಾರೂಢ ಎಲ್‌ಡಿಎಫ್ 29 ಮತ್ತು ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ 19 ಸ್ಥಾನಗಳನ್ನು ಗೆದ್ದಿದೆ. ಇನ್ನು, 2 ಸ್ಥಾನಗಳು ಸ್ವತಂತ್ರ ಅಭ್ಯರ್ಥಿಗಳ ಪಾಲಾಗಿದೆ. ಕಳೆದ ವಾರ ಅಭ್ಯರ್ಥಿಯ ಮರಣದ ನಂತರ ಒಂದು ಸ್ಥಾನಕ್ಕೆ ಚುನಾವಣೆಯನ್ನು ರದ್ದುಗೊಳಿಸಲಾಗಿತ್ತು.
ತಿರುವನಂತಪುರಂ, ಡಿಸೆಂಬರ್ 13: ಕೇರಳದಲ್ಲಿ ಬಿಜೆಪಿ ಕೇರಳದ ರಾಜಧಾನಿ ತಿರುವನಂತಪುರಂ (Tiruvananthapuram Corporation Election) ಅನ್ನು ಗೆದ್ದು, ಎಡಪಕ್ಷಗಳ 45 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿದೆ. ಮೊದಲ ಬಾರಿಗೆ, ಬಿಜೆಪಿ ನೇತೃತ್ವದ ಎನ್‌ಡಿಎ ತಿರುವನಂತಪುರಂ ಪುರಸಭೆಯಲ್ಲಿ ಗೆಲುವು ಸಾಧಿಸಿದೆ. ಅಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಕಳೆದ 45 ವರ್ಷಗಳಿಂದ ಆಡಳಿತ ನಡೆಸುತ್ತಿದೆ. ಇದೀಗ ಆ ಇತಿಹಾಸವನ್ನು ಮುರಿದಿರುವ ಬಿಜೆಪಿ ತಿರುವನಂತಪುರಂನಲ್ಲಿ ಗಟ್ಟಿಯಾಗಿ ನೆಲೆಯೂರಿದೆ. ಇಂದು ತಿರುವನಂತಪುರಂ ಕಾರ್ಪೋರೇಷನ್ ಚುನಾವಣೆಯ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರು ಭರ್ಜರಿಯಾಗಿ ಸಂಭ್ರಮಾಚರಣೆ ಮಾಡಿದ್ದಾರೆ.
ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಿರುವನಂತಪುರಂ ಪುರಸಭೆಯ 101 ವಾರ್ಡ್‌ಗಳಲ್ಲಿ ಎನ್‌ಡಿಎ 50 ಸ್ಥಾನಗಳನ್ನು ಗೆದ್ದಿದೆ. ಆಡಳಿತಾರೂಢ ಎಲ್‌ಡಿಎಫ್ 29 ಮತ್ತು ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ 19 ಸ್ಥಾನಗಳನ್ನು ಗೆದ್ದಿದೆ. ಇನ್ನು, 2 ಸ್ಥಾನಗಳು ಸ್ವತಂತ್ರ ಅಭ್ಯರ್ಥಿಗಳ ಪಾಲಾಗಿದೆ. ಕಳೆದ ವಾರ ಅಭ್ಯರ್ಥಿಯ ಮರಣದ ನಂತರ ಒಂದು ಸ್ಥಾನಕ್ಕೆ ಚುನಾವಣೆಯನ್ನು ರದ್ದುಗೊಳಿಸಲಾಗಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ