ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ

Updated on: Dec 13, 2025 | 5:33 PM

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಿರುವನಂತಪುರಂ ಪುರಸಭೆಯ 101 ವಾರ್ಡ್‌ಗಳಲ್ಲಿ ಎನ್‌ಡಿಎ 50 ಸ್ಥಾನಗಳನ್ನು ಗೆದ್ದಿದೆ. ಆಡಳಿತಾರೂಢ ಎಲ್‌ಡಿಎಫ್ 29 ಮತ್ತು ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ 19 ಸ್ಥಾನಗಳನ್ನು ಗೆದ್ದಿದೆ. ಇನ್ನು, 2 ಸ್ಥಾನಗಳು ಸ್ವತಂತ್ರ ಅಭ್ಯರ್ಥಿಗಳ ಪಾಲಾಗಿದೆ. ಕಳೆದ ವಾರ ಅಭ್ಯರ್ಥಿಯ ಮರಣದ ನಂತರ ಒಂದು ಸ್ಥಾನಕ್ಕೆ ಚುನಾವಣೆಯನ್ನು ರದ್ದುಗೊಳಿಸಲಾಗಿತ್ತು.

ತಿರುವನಂತಪುರಂ, ಡಿಸೆಂಬರ್ 13: ಕೇರಳದಲ್ಲಿ ಬಿಜೆಪಿ ಕೇರಳದ ರಾಜಧಾನಿ ತಿರುವನಂತಪುರಂ (Tiruvananthapuram Corporation Election) ಅನ್ನು ಗೆದ್ದು, ಎಡಪಕ್ಷಗಳ 45 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿದೆ. ಮೊದಲ ಬಾರಿಗೆ, ಬಿಜೆಪಿ ನೇತೃತ್ವದ ಎನ್‌ಡಿಎ ತಿರುವನಂತಪುರಂ ಪುರಸಭೆಯಲ್ಲಿ ಗೆಲುವು ಸಾಧಿಸಿದೆ. ಅಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಕಳೆದ 45 ವರ್ಷಗಳಿಂದ ಆಡಳಿತ ನಡೆಸುತ್ತಿದೆ. ಇದೀಗ ಆ ಇತಿಹಾಸವನ್ನು ಮುರಿದಿರುವ ಬಿಜೆಪಿ ತಿರುವನಂತಪುರಂನಲ್ಲಿ ಗಟ್ಟಿಯಾಗಿ ನೆಲೆಯೂರಿದೆ. ಇಂದು ತಿರುವನಂತಪುರಂ ಕಾರ್ಪೋರೇಷನ್ ಚುನಾವಣೆಯ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರು ಭರ್ಜರಿಯಾಗಿ ಸಂಭ್ರಮಾಚರಣೆ ಮಾಡಿದ್ದಾರೆ.

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಿರುವನಂತಪುರಂ ಪುರಸಭೆಯ 101 ವಾರ್ಡ್‌ಗಳಲ್ಲಿ ಎನ್‌ಡಿಎ 50 ಸ್ಥಾನಗಳನ್ನು ಗೆದ್ದಿದೆ. ಆಡಳಿತಾರೂಢ ಎಲ್‌ಡಿಎಫ್ 29 ಮತ್ತು ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ 19 ಸ್ಥಾನಗಳನ್ನು ಗೆದ್ದಿದೆ. ಇನ್ನು, 2 ಸ್ಥಾನಗಳು ಸ್ವತಂತ್ರ ಅಭ್ಯರ್ಥಿಗಳ ಪಾಲಾಗಿದೆ. ಕಳೆದ ವಾರ ಅಭ್ಯರ್ಥಿಯ ಮರಣದ ನಂತರ ಒಂದು ಸ್ಥಾನಕ್ಕೆ ಚುನಾವಣೆಯನ್ನು ರದ್ದುಗೊಳಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More