Loading video

ದೆಹಲಿಯ ರಸ್ತೆಗಳಲ್ಲಿ ಪಟಾಕಿ ಸಿಡಿಸಿ, ನೃತ್ಯ ಮಾಡಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

|

Updated on: Feb 08, 2025 | 5:47 PM

27 ವರ್ಷಗಳ ಕಾಲದ ನಂತರ ಕೇಸರಿ ಪಕ್ಷವು ರಾಷ್ಟ್ರ ರಾಜಧಾನಿಯಲ್ಲಿ ನಿರ್ಣಾಯಕ ಜನಾದೇಶದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗುತ್ತಿದ್ದಂತೆ ದೆಹಲಿಯ ಪ್ರಧಾನ ಕಚೇರಿಯ ಹೊರಗೆ ಬಿಜೆಪಿ ಬೆಂಬಲಿಗರು ಸಂಭ್ರಮಾಚರಣೆಯಲ್ಲಿ ತೊಡಗಿದರು. ದೆಹಲಿಯ 70 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಎಎಪಿ 22 ಸ್ಥಾನಗಳಲ್ಲಿ ಮುಂದಿದೆ.

ನವದೆಹಲಿ: ನವದೆಹಲಿಯಲ್ಲಿ ಬಿಜೆಪಿ 40 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಬಹುಮತ ಪಡೆದಿದೆ. ಹಾಗೇ, 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹೀಗಾಗಿ, ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸುವುದು ಖಚಿತವಾಗಿದೆ. ಸ್ಪಷ್ಟ ಬಹುಮತ ಸಿಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರ ಸಂತಸ ಎಲ್ಲೆ ಮೀರಿದ್ದು, ದೆಹಲಿಯ ರಸ್ತೆಗಳಲ್ಲಿ ಪಟಾಕಿ ಸಿಡಿಸಿ, ಡೊಳ್ಳುವಾದ್ಯಕ್ಕೆ ನೃತ್ಯ ಮಾಡಿ ತಮ್ಮ ಸಂಭ್ರಮಾಚರಣೆ ಮಾಡಿದ್ದಾರೆ. 27 ವರ್ಷಗಳ ಬಳಿಕ ದೆಹಲಿಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವುದರಿಂದ ಈ ಗೆಲುವು ಬಹಳ ವಿಶೇಷವಾಗಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ