ಪ್ರಧಾನಿ ಮೋದಿಯ ಮಾರ್ಫಿಂಗ್ ಫೋಟೋ ಶೇರ್ ಮಾಡಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತನಿಗೆ ಸೀರೆ ಉಡಿಸಿದ ವಿಡಿಯೋ ವೈರಲ್
ಡೊಂಬಿವ್ಲಿಯಲ್ಲಿ ರಾಜಕೀಯ ಬಿರುಗಾಳಿ ಎದ್ದಿದೆ. ಪ್ರಧಾನಿ ಮೋದಿಯವರ ಮಾರ್ಫಿಂಗ್ ಮಾಡಿದ ಚಿತ್ರವನ್ನು ಹಂಚಿಕೊಂಡಿದ್ದಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರಿಗೆ ಸೀರೆ ಉಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಾರ್ಫಿಂಗ್ ಮಾಡಿದ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಇಂದು ಡೊಂಬಿವ್ಲಿಯಲ್ಲಿ 73 ವರ್ಷದ ಕಾಂಗ್ರೆಸ್ ಕಾರ್ಯಕರ್ತನಿಗೆ ಬಿಜೆಪಿ ಕಾರ್ಯಕರ್ತರು ಸಾರ್ವಜನಿಕವಾಗಿ ಬೀದಿಯ ಬದಿಯಲ್ಲಿ ಸೀರೆ ಉಡಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಮುಂಬೈ, ಸೆಪ್ಟೆಂಬರ್ 23: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಪ್ರಧಾನಿ ಮೋದಿಯವರ (PM Modi) ಮಾರ್ಫಿಂಗ್ ಮಾಡಿದ ಫೋಟೋವನ್ನು ಹಂಚಿಕೊಂಡ ನಂತರ ಡೊಂಬಿವ್ಲಿಯಲ್ಲಿ ರಾಜಕೀಯ ಘರ್ಷಣೆ ಭುಗಿಲೆದ್ದಿತು. ಇದು ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿಗರ ನಡುವೆ ಪ್ರತಿಭಟನೆಗೆ ಕಾರಣವಾಯಿತು. ಪ್ರಧಾನಿ ನರೇಂದ್ರ ಮೋದಿಯವರ ಮಾರ್ಫಿಂಗ್ ಮಾಡಿದ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಇಂದು ಡೊಂಬಿವ್ಲಿಯಲ್ಲಿ 73 ವರ್ಷದ ಕಾಂಗ್ರೆಸ್ ಕಾರ್ಯಕರ್ತನಿಗೆ ಬಿಜೆಪಿ ಕಾರ್ಯಕರ್ತರು ಸಾರ್ವಜನಿಕವಾಗಿ ಬೀದಿಯ ಬದಿಯಲ್ಲಿ ಸೀರೆ ಉಡಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

