AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಯೋಗೇಶ್ವರ್​ಗೆ ನೀಡುವಂತೆ ವರಿಷ್ಠರಿಗೆ ಬಿಜೆಪಿ ಕಾರ್ಯಕರ್ತರ ಆಗ್ರಹ

ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಯೋಗೇಶ್ವರ್​ಗೆ ನೀಡುವಂತೆ ವರಿಷ್ಠರಿಗೆ ಬಿಜೆಪಿ ಕಾರ್ಯಕರ್ತರ ಆಗ್ರಹ

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 10, 2024 | 2:54 PM

Share

ತಮ್ಮ ಮಗ ನಿಖಿಲ್ ಕುಮಾರಸ್ವಾಮಿಯನ್ನು ರಾಜಕೀಯ ಕ್ಷೇತ್ರದಲ್ಲಿ ಲಾಂಚ್ ಮಾಡಲು ಪ್ರಯತ್ನಿಸಿ ಪ್ರತಿಬಾರಿ ಕೈಸುಟ್ಟುಕೊಳ್ಳುತ್ತಿರುವ ಹೆಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಲು ತಯಾರಿಲ್ಲ. ಟಿಕೆಟ್ ಯಾರಿಗೆ ಸಿಗಲಿದೆ ಅನ್ನೋ ಅಂಶ ಕನ್ನಡಿಗರನ್ನು ಯಕ್ಷಪ್ರಶ್ನೆಯಾಗಿ ಕಾಡುತ್ತಿದೆ.

ರಾಮನಗರ: ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಮೊದಲೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ರಂಗೇರುತ್ತಿದೆ. ಇವತ್ತು ರಾಮನಗರ ಜಿಲ್ಲಾ ಬಿಜೆಪಿ ಘಟಕದ ಪದಾಧಿಕಾರಿ ಮತ್ತು ಸದಸ್ಯರು ಒಂದು ಪತ್ರಿಕಾ ಗೋಷ್ಠಿ ನಡೆಸಿ ಈ ಭಾಗದ ಹಿರಿಯ ಮತ್ತು ಜನಪ್ರಿಯ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರನ್ನು ಎನ್​ಡಿಎ ಅಭ್ಯರ್ಥಿಯಾಗಿ ಘೋಷಿಸಿ ಅವರ ಗೆಲುವಿಗೆ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಕೈಜೋಡಿಸಲು ನೆರವಾಗಬೇಕೆಂದು ಎರಡೂ ಪಕ್ಷಗಳ ರಾಜ್ಯ ಮತ್ತು ರಾಷ್ಟ್ರ ನಾಯಕರನ್ನು ಆಗ್ರಹಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚನ್ನಪಟ್ಟಣ ಕ್ಷೇತ್ರದ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ? ಕುತೂಹಲ ಕೆರಳಿಸಿದ ಹೆಚ್​ಡಿ ಕುಮಾರಸ್ವಾಮಿ ನಡೆ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More