ಮಂಡ್ಯ: ತಮಿಳುನಾಡುಗೆ ಕಾವೇರಿ ನೀರು, ಸರ್ಕಾರದ ವಿರುದ್ಧ ಪ್ರತಿಭಟನೆಗಿಳಿದ ರೈತರಿಗೆ ಬಿಜೆಪಿ ಕಾರ್ಯಕರ್ತರ ಬೆಂಬಲ

ಅರುಣ್​ ಕುಮಾರ್​ ಬೆಳ್ಳಿ

Updated on: Aug 21, 2023 | 1:50 PM

ನ್ಯಾಯಾಲಯದ ತೀರ್ಪಿನ ಹೊರತಾಗಿಯೂ ಪಕ್ಕದ ರಾಜ್ಯಕ್ಕೆ ನೀರು ಹರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಧಿಕ್ಕಾರ, ರಾಜ್ಯದ ರೈತರನ್ನು ಬಲಿಪಶು ಮಾಡುತ್ತಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಧಿಕ್ಕಾರ ಅಂತ ಬಿಜೆಪಿ ನಾಯಕರು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಮಂಡ್ಯ: ನೆರರಾಜ್ಯ ತಮಿಳುನಾಡಿಗೆ ಕಾವೇರಿ ನದಿ ನೀರು (Cauvery River water) ಹರಿಬಿಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು ರೊಚ್ಚಿಗೆದ್ದಿದ್ದಾರೆ. ಮಂಡ್ಯದಲ್ಲಿಂದು ರೈತರೊಂದಿಗೆ ಸೇರಿ ಬಿಜೆಪಿ ಕಾರ್ಯಕರ್ತರು (BJP workers) ಸಹ ಪ್ರತಿಭಟನೆ ನಡೆಸಿದರು. ಈ ವಿಡಿಯೋದಲ್ಲಿ ರೈತರಿಗಿಂತ ಬಿಜೆಪಿ ನಾಯಕರ ಸಂಖ್ಯೆ ಹೆಚ್ಚಾಗಿದೆ. ರೈತರ ಹಿತಾಸಕ್ತಿಯನ್ನು ಬಲಿ ಕೊಟ್ಟು ತಮಿಳುನಾಡುಗೆ ನೀರು ಬಿಡುತ್ತಿರುವ ರೈತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ, ಮಾತು ತಪ್ಪಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ನ್ಯಾಯಾಲಯದ ತೀರ್ಪಿನ ಹೊರತಾಗಿಯೂ ಪಕ್ಕದ ರಾಜ್ಯಕ್ಕೆ ನೀರು ಹರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (CM Siddaramaiah) ಧಿಕ್ಕಾರ, ರಾಜ್ಯದ ರೈತರನ್ನು ಬಲಿಪಶು ಮಾಡುತ್ತಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ (DK Shivakumar) ಧಿಕ್ಕಾರ ಅಂತ ಬಿಜೆಪಿ ನಾಯಕರು ಘೋಷಣೆಗಳನ್ನು ಕೂಗುತ್ತಿದ್ದಾರೆ. ಜಿಲ್ಲೆಯ ಬೇರೆ ಭಾಗಗಳಲ್ಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.