ಯತ್ನಾಳ್ ಉಚ್ಛಾಟನೆ ಬೆನ್ನಲ್ಲೇ ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ದೇವಸ್ಥಾನದಲ್ಲಿ ಪೂಜೆ

| Updated By: ವಿವೇಕ ಬಿರಾದಾರ

Updated on: Mar 26, 2025 | 9:34 PM

ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವುದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಉಚ್ಚಾಟನೆಗೆ ಯತ್ನಾಳ್ ಅವರ ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಲವು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರೆ, ಯತ್ನಾಳ್ ಅವರ ಬೆಂಬಲಿಗರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವುದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಉಚ್ಚಾಟನೆಗೆ ಯತ್ನಾಳ್ ಅವರ ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅವರು ಪಕ್ಷದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಉಚ್ಛಾಟನೆ ಮಾಡುತ್ತಿದ್ದಂತೆ ಕೆಲ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಹಿ ಹಂಚಿ ಸಂಭ್ರಮಿಸಿದರು. ಬಳಿಕ, ವಿಜಯಪುರ ನಗರದಲ್ಲಿನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.