Bengaluru News: ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

|

Updated on: Jul 22, 2023 | 1:34 PM

ಭಯೋತ್ಪಾದಕರಿಗೆ ಕುಮಕ್ಕು ನೀಡುವ ಸರ್ಕಾರಕ್ಕೆ ಧಿಕ್ಕಾರ, ಹಿರಿಯ ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸರ್ಕಾರಕ್ಕೆ ಧಿಕ್ಕಾರ ಅಂತ ಕಾರ್ಯಕರ್ತರು ಘೋಷಣೆ ಕೂಗಿದರು.

ಬೆಂಗಳೂರು: ಬಜೆಟ್ ಅಧಿವೇಶನದಿಂದ 10 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದನ್ನು ವಿರೋಧಿಸಿ ಪಕ್ಷದ ಕಾರ್ಯಕರ್ತರು ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ (N Ravi Kumar) ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ (Freedom Park) ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ಸಾಕಷ್ಟು ಮಹಿಳಾ ಕಾರ್ಯಕರ್ತರು ಸಹ ಭಾಗವಹಿಸಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಭಯೋತ್ಪಾದಕರಿಗೆ ಕುಮಕ್ಕು ನೀಡುವ ಸರ್ಕಾರಕ್ಕೆ ಧಿಕ್ಕಾರ, ಹಿರಿಯ ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸರ್ಕಾರಕ್ಕೆ ಧಿಕ್ಕಾರ, ಚುನಾವಣೆ ಸಮಯದಲ್ಲಿ ನೀಡಿದ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ವಿಫಲವಾದ ಸರ್ಕಾರಕ್ಕೆ ಧಿಕ್ಕಾರ, ಹಿಂದೂಗಳಿಗೆ ರಕ್ಷಣೆ ಒದಗಿಸದ ಸರ್ಕಾರಕ್ಕೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕಾರ್ಯಕರ್ತರು ಕೂಗಿದರು. ಶಾಸಕ ಮತ್ತು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ