ಚಂದ್ರಶೇಖರನ್ ಸಾವು: ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಸಿಎಂ ನಿವಾಸ ಬಳಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಆದರೆ ಸ್ವಲ್ಪ ಹೊತ್ತಿನಲ್ಲೇ ದೊಡ್ಡ ವ್ಯಾನ್ ನೊಂದಿಗೆ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಪೊಲೀಸ್ಮ ಪಡೆ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಿತು. ವ್ಯಾನ್ ನಲ್ಲಿದ್ದ ಕಾರ್ಯಕರ್ತರಲ್ಲಿ ಹಲವರು ಮಾಧ್ಯಮಗಳ ಜೊತೆ ಒಟ್ಟಿಗೆ ಮಾತಾಡಲು ಪ್ರಾರಂಭಿಸಿದ್ದರಿಂದ ಯಾರೊಬ್ಬರ ಮಾತೂ ಸ್ಪಷ್ಟವಾಗಿ ಕೇಳಿಸಲ್ಲ.

ಚಂದ್ರಶೇಖರನ್ ಸಾವು: ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಸಿಎಂ ನಿವಾಸ ಬಳಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
|

Updated on: May 30, 2024 | 12:41 PM

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Development Board) ಮಂಡಳದಲ್ಲಿ ಅಧೀಕ್ಷಕರಾಗಿ ಕೆಲಸ ಮಾಡುತ್ತಿದ್ದ ಚಂದ್ರಶೇಖರನ್ (Chandrasekaran) ತಮ್ಮ ಡೆತ್ ನೋಟ್ ನಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಚಿವ ಬಿ ನಾಗೇಂದ್ರ (B Nagendra) ಅವರ ಹೆಸರು ಉಲ್ಲೇಖಿಸಿರುವುದರಿಂದ ಸಚಿವನನ್ನು ಸಂಪುಟದಿಂದ ವಜಾ ಮಾಡಬೇಕೆಂದು ವಿರೋಧ ಪಕ್ಷಗಳು ಆಗ್ರಹಿಸುತ್ತಿವೆ. ಸಿದ್ದರಾಮಯ್ಯ ಸರ್ಕಾರದಿಂದ ಇನ್ನೂ ಪ್ರತಿಕ್ರಿಯೆ ಬಂದಿಲ್ಲ. ಇದೇ ಹಿನ್ನೆಲೆಯಲ್ಲಿ ಹಲವಾರು ಬಿಜೆಪಿ ಕಾರ್ಯಕರ್ತರು ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ದಕ್ಷ ಅಧಿಕಾರಿಯ ಸಾವಿಗೆ ಕಾರಣನಾದ ಸಚಿವ ಬಿ ನಾಗೇಶ್ ತೊಲಗಲಿ ಮತ್ತು ಸಚಿವನ ಫೋಟೋವಿದ್ದ ಪ್ಲಕಾರ್ಡ್ ಗಳನ್ನು ಪ್ರದರ್ಶಿಸಿದರು. ಆದರೆ ಸ್ವಲ್ಪ ಹೊತ್ತಿನಲ್ಲೇ ದೊಡ್ಡ ವ್ಯಾನ್ ನೊಂದಿಗೆ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಪೊಲೀಸ್ಮ ಪಡೆ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಿತು. ವ್ಯಾನ್ ನಲ್ಲಿದ್ದ ಕಾರ್ಯಕರ್ತರಲ್ಲಿ ಹಲವರು ಮಾಧ್ಯಮಗಳ ಜೊತೆ ಒಟ್ಟಿಗೆ ಮಾತಾಡಲು ಪ್ರಾರಂಭಿಸಿದ್ದರಿಂದ ಯಾರೊಬ್ಬರ ಮಾತೂ ಸ್ಪಷ್ಟವಾಗಿ ಕೇಳಿಸಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಚಿವ ಬಿ.ನಾಗೇಂದ್ರ ಸ್ವಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪರದಾಟ: ಬಸ್​​ ವ್ಯವಸ್ಥೆ ಇಲ್ಲದೆ ಟಾಟಾಏಸ್​​ನಲ್ಲಿ ಪ್ರಯಾಣ

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ