ಬಂಗಾಳ ನೆಲದಲ್ಲಿ ಹೊಸ ಸೂರ್ಯೋದಯವಾಗಿದೆ: ಇದೀಗ ಬದಲಾವಣೆ ಪರ್ವ ಶುರು ಎಂದ ಮೋದಿ

Updated on: May 04, 2026 | 8:37 PM

ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ದಿಗ್ವಿಜಯದ ಕುರಿತು ಭಾಷಣ ಮಾಡಿದರು. ಈ ಗೆಲುವನ್ನು ಪಕ್ಷದ ಕಾರ್ಯಕರ್ತರು ಮತ್ತು ಬಂಗಾಳದ ಜನರಿಗೆ ಸಮರ್ಪಿಸಿದರು. ರಾಜ್ಯದ ಭವಿಷ್ಯಕ್ಕಾಗಿ ಅಭಿವೃದ್ಧಿ, ಮಹಿಳೆಯರಿಗೆ ಸುರಕ್ಷತೆ, ಯುವಕರಿಗೆ ಉದ್ಯೋಗ ಮತ್ತು ಆಯುಷ್ಮಾನ್ ಭಾರತ್ ಯೋಜನೆ ಜಾರಿಯ ಭರವಸೆ ನೀಡಿದರು. ಇದು ಹೊಸ ಸೂರ್ಯೋದಯದ ಆರಂಭ ಎಂದು ಬಣ್ಣಿಸಿದರು.

ನವದೆಹಲಿ, ಮೇ 04: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದೆ. ಹೀಗಾಗಿ ಇಂದು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿಜಯೋತ್ಸವ ಕಾರ್ಯಕ್ರಮ ಮಾಡಲಾಯಿತು. ಈ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಬಂಗಾಳ ಚುನಾವಣೆ ವೇಳೆ ಅಮಾಯಕರ ಹತ್ಯೆಗಳಾಗಿವೆ. ಆದರೆ ಬಂಗಾಳದಲ್ಲಿ ಮೊದಲ ಬಾರಿಗೆ ಹಿಂಸಾಚಾರ ರಹಿತ ಚುನಾವಣೆ ನಡೆದಿದೆ. ಹಿಂಸಾಚಾರ ರಾಜಕೀಯವನ್ನು ಬೇರು ಸಹಿತ ಕಿತ್ತುಹಾಕಿದ್ದೇವೆ. ಬಂಗಾಳ ನೆಲದಲ್ಲಿ ಹೊಸ ಸೂರ್ಯೋದಯವಾಗಿದೆ. ಈಗ ಬದಲಾವಣೆ ಪರ್ವ ಶುರು, ಸೇಡು ತೀರಿಸಿಕೊಳ್ಳುವುದಲ್ಲ. ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ಗೆದ್ದಿದೆ ಎಂದರು. ಪಶ್ಚಿಮ ಬಂಗಾಳದ ಮಹಿಳೆಯರು ಟಿಎಂಸಿಗೆ ತಕ್ಕ ಪಾಠ ಕಲಿಸಿದ್ದಾರೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ಪಶ್ಚಿಮ ಬಂಗಾಳದಲ್ಲಿ ದಾಖಲೆ ಮತದಾನವಾಗಿದೆ.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More