ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ, ರಾಯಚೂರಿನಲ್ಲಿ ಬೃಹತ್ ಸಮಾವೇಶ

ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ, ರಾಯಚೂರಿನಲ್ಲಿ ಬೃಹತ್ ಸಮಾವೇಶ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Oct 11, 2022 | 2:41 PM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಗೋವಿಂದ ಕಾರಜೋಳ, ಬಿ ಶ್ರೀರಾಮುಲು ಹಲವಾರು ಶಾಸಕರು, ಸಾವಿರಾರು ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ರಾಯಚೂರು:  ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಭಾರತ ಜೋಡೋ ಯಾತ್ರೆ ನಡೆಸುತ್ತಿದ್ದರೆ ಅದಕ್ಕೆ ಪ್ರತಿಯಾಗಿ ಭಾರತೀಯ ಜನತಾ ಪಕ್ಷ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ (BS Yediyurappa) ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆ (Janasankalpa Yatre) ಆರಂಭಿಸಿದ್ದು ಬಿಸಿಲುನಾಡು ರಾಯಚೂರಿನಲ್ಲಿ ಇಂದು ಬೃಹತ್ ಸಮಾವೇಶವನ್ನು ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಸಚಿವರಾದ ಗೋವಿಂದ ಕಾರಜೋಳ, ಬಿ ಶ್ರೀರಾಮುಲು ಹಲವಾರು ಶಾಸಕರು, ಸಾವಿರಾರು ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.