Karnataka Assembly Polls; ಬಿಜೆಪಿ ಪ್ರಣಾಳಿಕೆ ಬೋಗಸ್, ಅದರಲ್ಲಿ ನೀಡಿದ ಆಶ್ವಾಸನೆಗಳನ್ನು ಪಕ್ಷ ಈಡೇರಿಸುವುದಿಲ್ಲ: ಸಿದ್ದರಾಮಯ್ಯ
2013 ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ 165 ಆಶ್ವಾಸನೆಗಳ ಘೋಷಣೆ ಮಾಡಿತ್ತು ಮತ್ತು ಅವುಗಳ ಪೈಕಿ 158 ಈಡೇರಿಸಿತ್ತು ಎಂದು ಸಿದ್ದರಾಮಯ್ಯ ಹೇಳಿದರು.
ಗದಗ: ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬೆಳ್ಳಟ್ಟಿ ಗ್ರಾಮಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah) ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ (manifesto) ಬೋಗಸ್ ಎಂದು ಹೇಳಿದರು. 2018 ರಲ್ಲಿ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಬಿಜೆಪಿ 600 ಭರವಸೆಗಳನ್ನು ನೀಡಿತ್ತು. ಆದರೆ ಅವುಗಳಲ್ಲಿ 55 ಭರವಸೆಗಳನ್ನು ಮಾತ್ರ ಈಡೇರಿಸಿದೆ ಎಂದು ಅವರು ಹೇಳಿದರು. 2013 ರ ವಿಧಾನ ಸಭಾ ಚುನಾವಣೆಯಲ್ಲಿ (assembly polls) ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ 165 ಆಶ್ವಾಸನೆಗಳ ಘೋಷಣೆ ಮಾಡಿತ್ತು ಮತ್ತು ಅವುಗಳ ಪೈಕಿ 158 ಈಡೇರಿಸಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಇರುವ ವ್ಯತ್ಯಾಸ ಅದೇ ಎಂದು ಸಿದ್ದರಾಮಯ್ಯ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ