ಮೀಸಲಾತಿ ಅನ್ಯಾಯ ಆರೋಪ: ಸರ್ಕಾರದ ವಿರುದ್ಧ ಪಾದಯಾತ್ರೆ ಘೋಷಿಸಿದ ಬಿಜೆಪಿ
ಚಿತ್ರದುರ್ಗದಲ್ಲಿ ಬಿಜೆಪಿಯ ಎಸ್ಸಿ, ಎಸ್ಟಿ ಜನಾಂದೋಲನ ಸಭೆ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ ಘೋಷಿಸಿದೆ. ಮಾರ್ಚ್ 22ರಂದು ಚಿತ್ರದುರ್ಗದಿಂದ ವಿಧಾನಸೌಧಕ್ಕೆ ಪಾದಯಾತ್ರೆ ಆರಂಭಿಸಿ, ಮಾರ್ಚ್ 27ರಂದು ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಸರ್ಕಾರ ಹೋರಾಟಕ್ಕೆ ಸ್ಪಂದಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ.
ಚಿತ್ರದುರ್ಗ, ಮಾರ್ಚ್ 08: ನಗರದಲ್ಲಿ ಬಿಜೆಪಿಯಿಂದ ಇಂದು ಎಸ್ಸಿ, ಎಸ್ಟಿ ಜನಾಂದೋಲನ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ಘೋಷಿಸಿದೆ. ಮಾರ್ಚ್ 22ರಂದು ಚಿತ್ರದುರ್ಗದಿಂದ ಪಾದಯಾತ್ರೆ ಆರಂಭಿಸಿ, ಮಾರ್ಚ್ 27ರಂದು ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಬಿಜೆಪಿ ಜನಾಂದೋಲನ ಮುಖ್ಯಸ್ಥ ಪಿ. ರಾಜೀವ್ ಅವರು ಮಾತನಾಡಿ, ಮಾರ್ಚ್ 23ರೊಳಗೆ ರಾಜ್ಯ ಸರ್ಕಾರ ಹೋರಾಟಕ್ಕೆ ಸ್ಪಂದಿಸಬೇಕು. ಇಲ್ಲವಾದರೆ ಹೋರಾಟದ ಸ್ವರೂಪ ಉಗ್ರವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್ನಾಗ್ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ

