ಕೆಪಿಸಿಸಿ ಅಧ್ಯಕ್ಷರಾಗಿ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್ ಆಗ್ರಹ

Updated on: Aug 25, 2025 | 12:40 PM

ವಿಧಾನಸಭೆಯಲ್ಲಿ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಆರ್​ಎಸ್​ಎಸ್ ಗೀತೆಯನ್ನು ಹಾಡಿದ್ದರೆ ಒಪ್ಪಿಕೊಳ್ಳಬಹುದು. ಆದರೆ, ಕಾಂಗ್ರೆಸ್ ಅಧ್ಯಕ್ಷರಾಗಿ ಇದನ್ನು ಮಾಡಿದ್ದರೆ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಡಿಕೆ ಶಿವಕುಮಾರ್​​ಗೆ ಹಲವು ಮುಖಗಳಿವೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಬೆಂಗಳೂರು, ಆಗಸ್ಟ್ 25: ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸಭೆಯಲ್ಲಿ ಆರ್​​ಎಸ್​ಎಸ್ ಗೀತೆ ಹಾಡಿದ್ದನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಾರೆ. ಹಾಗೆಂದು, ಅವರು ಉಪ ಮುಖ್ಯಮಂತ್ರಿಗಳಾಗಿ ಅದನ್ನು ಹಾಡಿದ್ದರೆ ತಕರಾರಿಲ್ಲ. ಆದರೆ, ಕೆಪಿಸಿಸಿ ಅಧ್ಯಕ್ಷರಾಗಿ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್​​​ನ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ. ಆರ್​ಎಸ್​​ಎಸ್ ಅನ್ನು ಈ ದೇಶದಲ್ಲಿ ಮೂರು ಬಾರಿ ಈಗಾಗಲೇ ನಿಷೇಧ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಡೆಪ್ಯುಟಿ ಮುಖ್ಯಮಂತ್ರಿಗಳಾಗಿ ಸಂಘದ ಪ್ರಾರ್ಥನೆ ಮಾಡಿದರೆ ನಮ್ಮದೇನು ಅಭ್ಯಂತರವಿಲ್ಲ. ಯಾಕೆಂದರೆ ಸರ್ಕಾರ ಎಂಬುದು ಒಂದು ಪಕ್ಷದ್ದಲ್ಲ, ಇಡೀ ಏಳು ಕೋಟಿ ಕರ್ನಾಟಕ ಜನತೆಯ ಸರ್ಕಾರ. ಅದರಲ್ಲಿ ಆರ್​ಎಸ್​ಎಸ್​ನವರೂ ಇದ್ದಾರೆ, ಜಮಾಅತ್ ಇಸ್ಲಾಮಿ ಅವರೂ ಇದಾರೆ ಎಲ್ಲರೂ ಇದ್ದಾರೆ. ತಾಲಿಬಾನಿಗಳೂ ಇದ್ದಾರೆ ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾಗಿ ಅವರು (ಡಿಕೆಶಿ) ಆ ರೀತಿ ಹೇಳುವಹಾಗೆ ಇಲ್ಲ. ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಹೇಳಿದ್ದರೆ ಅವರು ಕ್ಷಮೆ ಕೇಳಬೇಕಾಗುತ್ತದೆ. ಯಾಕೆಂದರೆ, ಮಹಾತ್ಮ ಗಾಂಧಿಯವರನ್ನು ಕೊಂದಂತ ಸಂಘಟನೆ ಅದು. ಆ ಸಂಘಟನೆಯ ಪ್ರಾರ್ಥನೆ ಮಾಡುವುದು ಸರಿಯಲ್ಲ ಎಂದರು.

ಡಿಕೆ ಶಿವಕುಮಾರ್​​ಗೆ ಹಲವು ಮುಖ: ಬಿಕೆ ಹರಿಪ್ರಸಾದ್

ಡಿಕೆ ಶಿವಕುಮಾರ್​​ಗೆ ಹಲವು ಮುಖಗಳಿವೆ. ಅವರು ಕೃಷಿಕರು ಎಂದು ಹೇಳಿಕೊಳ್ಳುತ್ತಾರೆ. ಆಮೇಲೆ ಒಮ್ಮೊಮ್ಮೆ ಕ್ವಾರಿ ಮಾಲೀಕ, ಎಜುಕೇಷನಿಸ್ಟ್, ಉದ್ಯಮಿ ಎಂದೆಲ್ಲ ಹೇಳಿಕೊಳ್ಳುತ್ತಾರೆ. ಹೀಗಾಗಿ ಯಾರಿಗೆ ಸಂದೇಶ ಕೊಡಬೇಕು ಎಂಬುದನ್ನು ಅವರು ಗಮನದಲ್ಲಿ ಇಟ್ಟುಕೊಂಡಿದ್ದಾರೆ ನಮಗೆ ಗೊತ್ತಿಲ್ಲ. ಯಾರನ್ನು ಮೆಚ್ಚಿಸುವುದಕ್ಕೆ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಆದರೆ ಉಪ ಮುಖ್ಯಮಂತ್ರಿಯಾಗಿ ಹಾಗೆ ಮಾಡಿದ್ದರೆ ನಮ್ಮದೇನೂ ಅಭ್ಯಂತರ ಇಲ್ಲ. ಕಾಂಗ್ರೆಸ್ ಅಧ್ಯಕ್ಷರಾಗಿ ಮಾಡಿದ್ದರೆ ಅವರು ಕ್ಷಮೆ ಕೇಳಬೇಕಾಗುತ್ತದೆ ಎಂದು ಹರಿಪ್ರಸಾದ್ ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 25, 2025 12:05 PM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More