AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್​ನವರು ಪುಕ್ಕಲರು, ನಾವು ಮೈಮರೆತ್ತಿದ್ದಕ್ಕೆ ವಿಜೃಂಭಿಸುತ್ತಿದ್ದಾರೆ: ಹರಿಪ್ರಸಾದ್ ಕಿಡಿ

ಆರ್​ಎಸ್​ಎಸ್​ನವರು ಪುಕ್ಕಲರು, ನಾವು ಮೈಮರೆತ್ತಿದ್ದಕ್ಕೆ ವಿಜೃಂಭಿಸುತ್ತಿದ್ದಾರೆ: ಹರಿಪ್ರಸಾದ್ ಕಿಡಿ

ರಮೇಶ್ ಬಿ. ಜವಳಗೇರಾ
|

Updated on: Jun 21, 2026 | 8:01 PM

Share

ಬಿಕೆ ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಇಂದು (ಜೂನ್ 21) ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಂದ ಬಿಕೆ ಹರಿಪ್ರಸಾದ್ ಅವರು ಧ್ವಜ ಸ್ವೀಕರಿಸಿದರು. ಈ ಮೂಲಕ ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಬಳಿಕ ಮಾತನಾಡಿ ಹರಿಪ್ರಸಾದ್, ಬಿಜೆಪಿ ಹಾಗೂ ಆರ್​​ಎಸ್​​ಎಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು, (ಜೂನ್ 21): ಬಿಕೆ ಹರಿಪ್ರಸಾದ್ (BK Hariprasad) ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಇಂದು (ಜೂನ್ 21) ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಂದ ಬಿಕೆ ಹರಿಪ್ರಸಾದ್ ಅವರು ಧ್ವಜ ಸ್ವೀಕರಿಸಿದರು. ಈ ಮೂಲಕ ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಬಳಿಕ ಮಾತನಾಡಿ ಹರಿಪ್ರಸಾದ್, ಬಿಜೆಪಿ ಹಾಗೂ ಆರ್​​ಎಸ್​​ಎಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗೋಡ್ಸೆ ಒಬ್ಬ ಈ ದೇಶದ ಮೊಟ್ಟಮೊದಲ ಉಗ್ರ ಎಂದು ಬಿಜೆಪಿ ಹೇಳಿಲ್ಲ. ಗೋಡ್ಸೆ ಒಬ್ಬ ಕೊಲೆಗಾರ ಎಂದು ಬಿಜೆಪಿಯವರು ಇದುವರೆಗೆ ಹೇಳಿಲ್ಲ. ಆರ್​ಎಸ್​ಎಸ್​ನವರು ಪುಕ್ಕಲರು ಅವರಿಗೆ ಧೈರ್ಯವೇ ಇಲ್ಲ. ನಾವು ಮೈಮರೆಯುತ್ತಿದ್ದೇವೆ. ಅದಕ್ಕಾಗಿ ಅವರು ವಿಜೃಂಭಿಸುತ್ತಿದ್ದಾರೆ ಎಂದು ಆರ್​​ಎಸ್​​ಎಸ್ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us