ಕರ್ನಾಟಕದಲ್ಲಿ ಮತ್ತಷ್ಟು ಡಿಸಿಎಂ ಹುದ್ದೆ ಸೃಷ್ಟಿ?: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಕೊಟ್ರು ಸ್ಪಷ್ಟನೆ
Karnataka Politics: ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಖಾಸಗಿ ವಿಚಾರವಾಗಿ ದೆಹಲಿಗೆ ತೆರಳುತ್ತಿರೋದಾಗಿ ತಿಳಿಸಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ದೆಹಲಿಗೆ ಪ್ರಯಾಣ ಬೆಳೆಶೋದಾಗಿ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ನಿರ್ಧಾರ ನಿರೀಕ್ಷಿಸುವುದಾಗಿ ಹೇಳಿರುವ ಅವರು, ಹೆಚ್ಚುವರಿ ಡಿಸಿಎಂ ಸೃಷ್ಟಿ ಕೇವಲ ಊಹಾಪೋಹ ಎಂದಿದ್ದಾರೆ.
ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ಮತ್ತಷ್ಟು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿ ಊಹಾಪೋಹವಾಗಿದ್ದು, ಶೀಘ್ರವೇ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅನುಮತಿ ನೀಡುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ತಾವು ಪ್ರವಾಸದಲ್ಲಿರಲಿದ್ದು, ದೆಹಲಿಗೆ ತೆರಳುತ್ತಿರುವುದು ಕೂಡ ಖಾಸಗಿ ವಿಚಾರಕ್ಕೆ. ಕ್ಯಾಬಿನೆಟ್ ಸಂಬಂಧ ಮುಂದಿನ ಬೆಳವಣಿಗೆಗಳ ಬಳಿಕ ಮಾಹಿತಿ ನೀಡುತ್ತೇನೆ ಎಂದವರು ಮಾಹಿತಿ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

