ಮಾಟ ಮಂತ್ರದಿಂದ ಕುಮಾರಸ್ವಾಮಿ ಆರೋಗ್ಯ ಸರಿಯಿಲ್ಲ, ಸಿದ್ದರಾಮಯ್ಯ ಮಂಕಾಗಿದ್ದಾರೆ: ಮುನಿರತ್ನ ಸ್ಫೋಟಕ ಹೇಳಿಕೆ
ಸಿಲಿಕಾನ್ ಸಿಟಿಯ ಜನರ ಸಮಸ್ಯೆಯನ್ನು ಆಲಿಸಲು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿ ಶನಿವಾರ ಮತ್ತು ಭಾನುವಾರ 'ಬೆಂಗಳೂರು ನಡಿಗೆ' ಕಾರ್ಯಕ್ರಮ ಆಯೋಜಿಸಿ, ನಗರದ ಪ್ರಮುಖ ಪಾರ್ಕ್‌ಗಳಿಗೆ ತೆರಳುತ್ತಿದ್ದಾರೆ. ಅದರಂತೆ ಇಂದು ಮತ್ತಿಕೆರೆಯ ಜೆಪಿ ಪಾರ್ಕ್‌ಗೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕ ಸಂವಾದ ವೇದಿಕೆ ಮೇಲೆ ಹೈಡ್ರಾಮಾ ನಡೆಯಿತು. ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಹೈಡ್ರಾಮಾ ಸೃಷ್ಟಿಸಿದ್ದಾರೆ. ಸ್ಥಳೀಯ ಶಾಸಕನಾದ ನನಗೆ ಆಹ್ವಾನ ನೀಡಿಲ್ಲ ಮತ್ತು ತನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ವೇದಿಕೆಯಲ್ಲೇ ಧರಣಿ ನಡೆಸಿದರು. ಇನ್ನು ಸಿದ್ದರಾಮಯ್ಯ ವಿರುದ್ಧ ಮಾಟ ಮಂತ್ರ ಮಾಡಲಾಗಿದ್ದು, ಡಬ್ಬದಲ್ಲಿ ಹಾಕಿ ವಶೀಕರಣ ಮಾಡಿದ್ದಾರೆ. ಇದಕ್ಕಾಗಿ ಕೋಣ ಬಲಿ ಕೊಟ್ಟಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮಂಕಾಗಿದ್ದಾರೆ. ಇನ್ನು ಕುಮಾರಸ್ವಾಮಿ ವಿರುದ್ಧವೂ ಮಾಟ ಮಂತ್ರ ಮಾಡಿದ್ದಾರೆ. ಅದಕ್ಕೆ ಅವರಿಗೆ ಆರೋಗ್ಯ ಸರಿಯಿಲ್ಲ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.
ಬೆಂಗಳೂರು, (ಅಕ್ಟೋಬರ್ 12): ಸಿಲಿಕಾನ್ ಸಿಟಿಯ ಜನರ ಸಮಸ್ಯೆಯನ್ನು ಆಲಿಸಲು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿ ಶನಿವಾರ ಮತ್ತು ಭಾನುವಾರ ‘ಬೆಂಗಳೂರು ನಡಿಗೆ’ ಕಾರ್ಯಕ್ರಮ ಆಯೋಜಿಸಿ, ನಗರದ ಪ್ರಮುಖ ಪಾರ್ಕ್‌ಗಳಿಗೆ ತೆರಳುತ್ತಿದ್ದಾರೆ. ಅದರಂತೆ ಇಂದು ಮತ್ತಿಕೆರೆಯ ಜೆಪಿ ಪಾರ್ಕ್‌ಗೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕ ಸಂವಾದ ವೇದಿಕೆ ಮೇಲೆ ಹೈಡ್ರಾಮಾ ನಡೆಯಿತು. ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಹೈಡ್ರಾಮಾ ಸೃಷ್ಟಿಸಿದ್ದಾರೆ. ಸ್ಥಳೀಯ ಶಾಸಕನಾದ ನನಗೆ ಆಹ್ವಾನ ನೀಡಿಲ್ಲ ಮತ್ತು ತನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ವೇದಿಕೆಯಲ್ಲೇ ಧರಣಿ ನಡೆಸಿದರು. ಇನ್ನು ಸಿದ್ದರಾಮಯ್ಯ ವಿರುದ್ಧ ಮಾಟ ಮಂತ್ರ ಮಾಡಲಾಗಿದ್ದು, ಡಬ್ಬದಲ್ಲಿ ಹಾಕಿ ವಶೀಕರಣ ಮಾಡಿದ್ದಾರೆ. ಇದಕ್ಕಾಗಿ ಕೋಣ ಬಲಿ ಕೊಟ್ಟಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮಂಕಾಗಿದ್ದಾರೆ. ಇನ್ನು ಕುಮಾರಸ್ವಾಮಿ ವಿರುದ್ಧವೂ ಮಾಟ ಮಂತ್ರ ಮಾಡಿದ್ದಾರೆ. ಅದಕ್ಕೆ ಅವರಿಗೆ ಆರೋಗ್ಯ ಸರಿಯಿಲ್ಲ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

