ಮಾಟ ಮಂತ್ರದಿಂದ ಕುಮಾರಸ್ವಾಮಿ ಆರೋಗ್ಯ ಸರಿಯಿಲ್ಲ, ಸಿದ್ದರಾಮಯ್ಯ ಮಂಕಾಗಿದ್ದಾರೆ: ಮುನಿರತ್ನ ಸ್ಫೋಟಕ ಹೇಳಿಕೆ

Updated on: Oct 12, 2025 | 3:02 PM

ಸಿಲಿಕಾನ್ ಸಿಟಿಯ ಜನರ ಸಮಸ್ಯೆಯನ್ನು ಆಲಿಸಲು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿ ಶನಿವಾರ ಮತ್ತು ಭಾನುವಾರ 'ಬೆಂಗಳೂರು ನಡಿಗೆ' ಕಾರ್ಯಕ್ರಮ ಆಯೋಜಿಸಿ, ನಗರದ ಪ್ರಮುಖ ಪಾರ್ಕ್‌ಗಳಿಗೆ ತೆರಳುತ್ತಿದ್ದಾರೆ. ಅದರಂತೆ ಇಂದು ಮತ್ತಿಕೆರೆಯ ಜೆಪಿ ಪಾರ್ಕ್‌ಗೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕ ಸಂವಾದ ವೇದಿಕೆ ಮೇಲೆ ಹೈಡ್ರಾಮಾ ನಡೆಯಿತು. ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಹೈಡ್ರಾಮಾ ಸೃಷ್ಟಿಸಿದ್ದಾರೆ. ಸ್ಥಳೀಯ ಶಾಸಕನಾದ ನನಗೆ ಆಹ್ವಾನ ನೀಡಿಲ್ಲ ಮತ್ತು ತನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ವೇದಿಕೆಯಲ್ಲೇ ಧರಣಿ ನಡೆಸಿದರು. ಇನ್ನು ಸಿದ್ದರಾಮಯ್ಯ ವಿರುದ್ಧ ಮಾಟ ಮಂತ್ರ ಮಾಡಲಾಗಿದ್ದು,  ಡಬ್ಬದಲ್ಲಿ ಹಾಕಿ ವಶೀಕರಣ ಮಾಡಿದ್ದಾರೆ. ಇದಕ್ಕಾಗಿ ಕೋಣ ಬಲಿ ಕೊಟ್ಟಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮಂಕಾಗಿದ್ದಾರೆ. ಇನ್ನು ಕುಮಾರಸ್ವಾಮಿ ವಿರುದ್ಧವೂ ಮಾಟ ಮಂತ್ರ ಮಾಡಿದ್ದಾರೆ. ಅದಕ್ಕೆ ಅವರಿಗೆ ಆರೋಗ್ಯ ಸರಿಯಿಲ್ಲ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.

ಬೆಂಗಳೂರು, (ಅಕ್ಟೋಬರ್ 12): ಸಿಲಿಕಾನ್ ಸಿಟಿಯ ಜನರ ಸಮಸ್ಯೆಯನ್ನು ಆಲಿಸಲು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿ ಶನಿವಾರ ಮತ್ತು ಭಾನುವಾರ ‘ಬೆಂಗಳೂರು ನಡಿಗೆ’ ಕಾರ್ಯಕ್ರಮ ಆಯೋಜಿಸಿ, ನಗರದ ಪ್ರಮುಖ ಪಾರ್ಕ್‌ಗಳಿಗೆ ತೆರಳುತ್ತಿದ್ದಾರೆ. ಅದರಂತೆ ಇಂದು ಮತ್ತಿಕೆರೆಯ ಜೆಪಿ ಪಾರ್ಕ್‌ಗೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕ ಸಂವಾದ ವೇದಿಕೆ ಮೇಲೆ ಹೈಡ್ರಾಮಾ ನಡೆಯಿತು. ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಹೈಡ್ರಾಮಾ ಸೃಷ್ಟಿಸಿದ್ದಾರೆ. ಸ್ಥಳೀಯ ಶಾಸಕನಾದ ನನಗೆ ಆಹ್ವಾನ ನೀಡಿಲ್ಲ ಮತ್ತು ತನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ವೇದಿಕೆಯಲ್ಲೇ ಧರಣಿ ನಡೆಸಿದರು. ಇನ್ನು ಸಿದ್ದರಾಮಯ್ಯ ವಿರುದ್ಧ ಮಾಟ ಮಂತ್ರ ಮಾಡಲಾಗಿದ್ದು,  ಡಬ್ಬದಲ್ಲಿ ಹಾಕಿ ವಶೀಕರಣ ಮಾಡಿದ್ದಾರೆ. ಇದಕ್ಕಾಗಿ ಕೋಣ ಬಲಿ ಕೊಟ್ಟಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮಂಕಾಗಿದ್ದಾರೆ. ಇನ್ನು ಕುಮಾರಸ್ವಾಮಿ ವಿರುದ್ಧವೂ ಮಾಟ ಮಂತ್ರ ಮಾಡಿದ್ದಾರೆ. ಅದಕ್ಕೆ ಅವರಿಗೆ ಆರೋಗ್ಯ ಸರಿಯಿಲ್ಲ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More