AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆಯೊಂದಿಗೆ ನವದಂಪತಿಗೆ ಕೆಡುಕು ಮಾಡಲು ಯತ್ನ

ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆಯೊಂದಿಗೆ ನವದಂಪತಿಗೆ ಕೆಡುಕು ಮಾಡಲು ಯತ್ನ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Sep 28, 2026 | 7:17 PM

Share

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಸಕ್ಕನಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ಕುಪೇಂದ್ರ ಅವರ ಮನೆ ಮುಂದೆ ಕಿಡಿಗೇಡಿಗಳು ವಾಮಾಚಾರ ನಡೆಸಿದ್ದಾರೆ. ಇತ್ತೀಚೆಗೆ ಮದುವೆಯಾಗಿದ್ದ ಅವರ ಮಗ-ಸೊಸೆಯ ವಿರುದ್ಧ ವಾಮಾಚಾರ ನಡೆಸಲು ಲಗ್ನ ಪತ್ರಿಕೆ, ಮೂಳೆ, ಕಪ್ಪು ಅನ್ನ ಬಳಸಲಾಗಿದೆ. ನವದಂಪತಿಗೆ ಕೆಡುಕು ಉಂಟು ಮಾಡುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದ್ದು, ಕುಪೇಂದ್ರ ಕುಟುಂಬ ಭಯಭೀತವಾಗಿದೆ. ಬೂದಿಕೋಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೋಲಾರ, ಸೆಪ್ಟೆಂಬರ್​ 28: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಕ್ಕನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ಕುಪೇಂದ್ರ ಮನೆ ಮುಂದೆ ದುಷ್ಕರ್ಮಿಗಳು ವಾಮಾಚಾರ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ವಾಮಾಚಾರಕ್ಕಾಗಿ ಮದುವೆಯ ಲಗ್ನ ಪತ್ರಿಕೆ, ಮೂಳೆ ಹಾಗೂ ಕಪ್ಪು ಅನ್ನವನ್ನು ಬಳಸಿರುವುದು ಪತ್ತೆಯಾಗಿದೆ. ಕುಪೇಂದ್ರ ಅವರು ಕಳೆದ ಒಂದು ತಿಂಗಳ ಹಿಂದೆಯಷ್ಟೇ ತಮ್ಮ ಮಗನ ವಿವಾಹ ಮಾಡಿದ್ದಾರೆ. ಇದೀಗ ನವದಂಪತಿಗೆ ಕೆಡುಕು ಉಂಟುಮಾಡುವ ದುರುದ್ದೇಶದಿಂದಲೇ ಕಿಡಿಗೇಡಿಗಳು ಲಗ್ನ ಪತ್ರಿಕೆ ಇಟ್ಟು ವಾಮಾಚಾರ ಮಾಡಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ವಾಮಾಚಾರ ಕಂಡು ಕುಪೇಂದ್ರ ಕುಟುಂಬ ಭಯಭೀತರಾಗಿದ್ದಾರೆ. ಬೂದಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More