ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!
ರಾಯಚೂರಿನ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಮಹಾಲಯ ಅಮಾವಾಸ್ಯೆ ಸಂದರ್ಭದಲ್ಲಿ, ಹುಣಸೆ ಮರಕ್ಕೆ ನೇತುಹಾಕಿದ್ದ ಮನುಷ್ಯ ಆಕೃತಿಯ ಕಪ್ಪು ಗೊಂಬೆ ಪತ್ತೆಯಾಗಿದ್ದು, ಸಿಬ್ಬಂದಿಯಲ್ಲಿ ತೀವ್ರ ಆತಂಕ ಮೂಡಿಸಿದೆ. ಕಚೇರಿಯ ಬಾಕಿ ಬಿಲ್‌ಗಳು ಮತ್ತು ಫೈಲ್‌ಗಳನ್ನು ತೆರವುಗೊಳಿಸಲು ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.
ರಾಯಚೂರು, ಅಕ್ಟೋಬರ್ 10: ಮಹಾಲಯ ಅಮಾವಾಸ್ಯೆ ಇರುವ ಕಾರಣ ರಾಯಚೂರಿನ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಕಚೇರಿಯಲ್ಲಿ ವಾಮಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಮೇಲ್ಭಾಗದಲ್ಲಿದ್ದ ಹುಣಸೆ ಮರದಲ್ಲಿ ಮಾನವ ಆಕೃತಿಯ ಕಪ್ಪು ಗೊಂಬೆಯನ್ನು ನೇತುಹಾಕಲಾಗಿತ್ತು.
ಸೌಲಭ್ಯಗಳ ಪರಿಶೀಲನೆಗೆ ತೆರಳಿದ್ದ ಸಿಬ್ಬಂದಿಯೊಬ್ಬರಿಗೆ ಈ ಗೊಂಬೆ ಮೊದಲಿಗೆ ಗೋಚರಿಸಿದ್ದು, ನಂತರ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ತಕ್ಷಣವೇ ಸಿಬ್ಬಂದಿ ಈ ಗೊಂಬೆಯನ್ನು ಸುಟ್ಟು ಹಾಕಿದ್ದಾರೆ. ಕಚೇರಿಯಲ್ಲಿ ಬಾಕಿ ಉಳಿದಿರುವ ಬಿಲ್‌ಗಳು ಮತ್ತು ತೆರವುಗೊಳ್ಳದ ಫೈಲ್‌ಗಳಿಂದ ಬೇಸತ್ತ ಯಾರೋ ಈ ವಾಮಾಚಾರ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಪಿಡಬ್ಲ್ಯೂಡಿ ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಈ ಕೃತ್ಯವು ಕಚೇರಿಯ ಕೆಲಸದ ವಾತಾವರಣಕ್ಕೆ ಅಡ್ಡಿಯಾಗಿದ್ದು, ನೌಕರರ ಮಾನಸಿಕ ನೆಮ್ಮದಿಗೆ ಭಂಗ ತಂದಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?

