ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

Edited By:

Updated on: Oct 10, 2026 | 11:56 AM

ರಾಯಚೂರಿನ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಮಹಾಲಯ ಅಮಾವಾಸ್ಯೆ ಸಂದರ್ಭದಲ್ಲಿ, ಹುಣಸೆ ಮರಕ್ಕೆ ನೇತುಹಾಕಿದ್ದ ಮನುಷ್ಯ ಆಕೃತಿಯ ಕಪ್ಪು ಗೊಂಬೆ ಪತ್ತೆಯಾಗಿದ್ದು, ಸಿಬ್ಬಂದಿಯಲ್ಲಿ ತೀವ್ರ ಆತಂಕ ಮೂಡಿಸಿದೆ. ಕಚೇರಿಯ ಬಾಕಿ ಬಿಲ್‌ಗಳು ಮತ್ತು ಫೈಲ್‌ಗಳನ್ನು ತೆರವುಗೊಳಿಸಲು ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.

ರಾಯಚೂರು, ಅಕ್ಟೋಬರ್ 10: ಮಹಾಲಯ ಅಮಾವಾಸ್ಯೆ ಇರುವ ಕಾರಣ ರಾಯಚೂರಿನ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಕಚೇರಿಯಲ್ಲಿ ವಾಮಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಮೇಲ್ಭಾಗದಲ್ಲಿದ್ದ ಹುಣಸೆ ಮರದಲ್ಲಿ ಮಾನವ ಆಕೃತಿಯ ಕಪ್ಪು ಗೊಂಬೆಯನ್ನು ನೇತುಹಾಕಲಾಗಿತ್ತು.

ಸೌಲಭ್ಯಗಳ ಪರಿಶೀಲನೆಗೆ ತೆರಳಿದ್ದ ಸಿಬ್ಬಂದಿಯೊಬ್ಬರಿಗೆ ಈ ಗೊಂಬೆ ಮೊದಲಿಗೆ ಗೋಚರಿಸಿದ್ದು, ನಂತರ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ತಕ್ಷಣವೇ ಸಿಬ್ಬಂದಿ ಈ ಗೊಂಬೆಯನ್ನು ಸುಟ್ಟು ಹಾಕಿದ್ದಾರೆ. ಕಚೇರಿಯಲ್ಲಿ ಬಾಕಿ ಉಳಿದಿರುವ ಬಿಲ್‌ಗಳು ಮತ್ತು ತೆರವುಗೊಳ್ಳದ ಫೈಲ್‌ಗಳಿಂದ ಬೇಸತ್ತ ಯಾರೋ ಈ ವಾಮಾಚಾರ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಪಿಡಬ್ಲ್ಯೂಡಿ ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಈ ಕೃತ್ಯವು ಕಚೇರಿಯ ಕೆಲಸದ ವಾತಾವರಣಕ್ಕೆ ಅಡ್ಡಿಯಾಗಿದ್ದು, ನೌಕರರ ಮಾನಸಿಕ ನೆಮ್ಮದಿಗೆ ಭಂಗ ತಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More