Video: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದ ಏರ್ ಇಂಡಿಯಾ ಬಸ್

Updated on: Oct 28, 2025 | 3:04 PM

ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಏರ್ ಇಂಡಿಯಾ ಬಸ್​ಗೆ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ವಿಮಾನ ರಕ್ಷಣಾ ಮತ್ತು ಅಗ್ನಿಶಾಮಕ ತಂಡವು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿತು. ಘಟನೆ ನಡೆದಾಗ ಬಸ್ ಖಾಲಿ ಇತ್ತು. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಮತ್ತು ವಿಮಾನ ನಿಲ್ದಾಣದಲ್ಲಿ ಎಲ್ಲಾ ಕಾರ್ಯಾಚರಣೆಗಳು ಸಾಮಾನ್ಯವಾಗಿದ್ದವು.

ನವದೆಹಲಿ, ಅಕ್ಟೋಬರ್ 28: ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಏರ್ ಇಂಡಿಯಾ ಬಸ್​ಗೆ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ವಿಮಾನ ರಕ್ಷಣಾ ಮತ್ತು ಅಗ್ನಿಶಾಮಕ ತಂಡವು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿತು. ಘಟನೆ ನಡೆದಾಗ ಬಸ್ ಖಾಲಿ ಇತ್ತು. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಮತ್ತು ವಿಮಾನ ನಿಲ್ದಾಣದಲ್ಲಿ ಎಲ್ಲಾ ಕಾರ್ಯಾಚರಣೆಗಳು ಸಾಮಾನ್ಯವಾಗಿದ್ದವು.

ಇಂದು ಮುಂಜಾನೆ ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ಗನ್ನವರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಕಸ್ಟಮ್ಸ್ ಅಧಿಕಾರಿಗಳ ಕೊಠಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು.ಬೆಂಕಿಯ ಅವಘಡದಲ್ಲಿ ಸಾಫ್ಟ್‌ವೇರ್ ಉಪಕರಣಗಳು, ವಲಸೆ ಕೊಠಡಿಯಲ್ಲಿ ಸ್ಪ್ಲಿಟ್ ಏರ್ ಕಂಡಿಷನರ್ ಮತ್ತು ಕಸ್ಟಮ್ಸ್ ಅಧಿಕಾರಿಗಳಿಗೆ ಸೇರಿದ ಲಗೇಜ್ ಬ್ಯಾಗ್‌ಗಳು ಬೆಂಕಿಗಾಹುತಿಯಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More