ಎಸಿ ಸ್ಫೋಟ, ದೆಹಲಿಯ ವಸತಿಗೃಹದಲ್ಲಿ ಅಗ್ನಿ ಅವಘಡ, 9 ಮಂದಿ ಸಜೀವದಹನ

Updated on: May 03, 2026 | 10:56 AM

ದೆಹಲಿಯ ವಿವೇಕ್ ವಿಹಾರದಲ್ಲಿರುವ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 9 ಮಂದಿ ಸುಟ್ಟು ಕರಕಲಾಗಿದ್ದಾರೆ. 20 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ನಾಲ್ಕು ಅಂತಸ್ಥಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಎಸಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಿದ್ದಾರೆ.ಬೆಂಕಿಯನ್ನು ನಂದಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ, ಆದರೆ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

ನವದೆಹಲಿ, ಮೇ 03: ದೆಹಲಿಯ ವಿವೇಕ್ ವಿಹಾರದಲ್ಲಿರುವ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 9 ಮಂದಿ ಸುಟ್ಟು ಕರಕಲಾಗಿದ್ದಾರೆ. 20 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ನಾಲ್ಕು ಅಂತಸ್ಥಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಎಸಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಿದ್ದಾರೆ.ಬೆಂಕಿಯನ್ನು ನಂದಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ, ಆದರೆ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

ಬೆಂಕಿಯ ಪರಿಣಾಮ ತೀವ್ರವಾಗಿದ್ದ ಎರಡನೇ ಮಹಡಿಯಿಂದ ಶವಗಳನ್ನು ಹೊರತೆಗೆಯಲಾಗಿದೆ ಎಂದು ಶಹದಾರಾ ಜಿಲ್ಲಾ ಡಿಸಿಪಿ ರಾಜೇಂದ್ರ ಪ್ರಸಾದ್ ಮೀನಾ ತಿಳಿಸಿದ್ದಾರೆ. 2, 3 ಮತ್ತು 4 ನೇ ಮಹಡಿಯಲ್ಲಿರುವ ಫ್ಲಾಟ್‌ಗಳಲ್ಲಿ ಬೆಂಕಿ ಕಂಡುಬಂದಿದೆ. ಬೆಂಕಿಯ ಬಗ್ಗೆ ವರದಿಯಾದ ಕೂಡಲೇ ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ ಕಟ್ಟಡದಿಂದ 10 ಕ್ಕೂ ಹೆಚ್ಚು ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More