VIDEO: ಇಲ್ಲಿ ಏನ್ ನಡೀತಿದೆ… ಗೊಂದಲದಲ್ಲೇ ಕೂತ RCB ಆಟಗಾರ
IPL 2025 RCB vs LSG: ಇಂಡಿಯನ್ ಪ್ರೀಮಿಯರ್ ಲೀಗ್ನ 70ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 227 ರನ್ ಕಲೆಹಾಕಿತು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18.4 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಆರ್ಸಿಬಿ 6 ವಿಕೆಟ್ಗಳ ಜಯ ಸಾಧಿಸಿದೆ.
ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ ಕೊನೆಯ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್ಗಳಲ್ಲಿ 227 ರನ್ ಕಲೆಹಾಕಿದರೆ, ಈ ಗುರಿಯನ್ನು ಆರ್ಸಿಬಿ 18.4 ಓವರ್ಗಳಲ್ಲಿ ಚೇಸ್ ಮಾಡಿತು. ಈ ಗೆಲುವಿನ ರೂವಾರಿ ಜಿತೇಶ್ ಶರ್ಮಾ.
ಕೇವಲ 33 ಎಸೆತಗಳನ್ನು ಎದುರಿಸಿದ ಜಿತೇಶ್ ಶರ್ಮಾ 6 ಭರ್ಜರಿ ಸಿಕ್ಸರ್ಗಳೊಂದಿಗೆ 85 ರನ್ ಬಾರಿಸಿ ಮಿಂಚಿದ್ದರು. ಅದರಲ್ಲೂ 19ನೇ ಓವರ್ನ 4ನೇ ಎಸೆತದಲ್ಲಿ ಜಿತೇಶ್ ವಿನ್ನಿಂಗ್ ಸಿಕ್ಸರ್ ಬಾರಿಸುತ್ತಿದ್ದಂತೆ ಇತ್ತ ಡಗೌಟ್ನಲ್ಲಿದ್ದ ಆರ್ಸಿಬಿ ಆಟಗಾರರು ಕುಣಿದು ಕುಪ್ಪಳಿಸಿದರು.
ಈ ಸಂಭ್ರಮದ ನಡುವೆ ಆರ್ಸಿಬಿ ಆಟಗಾರ ಬ್ಲೆಸಿಂಗ್ ಮುಝರಬಾನಿ ನೀಡಿದ ರಿಯಾಕ್ಷನ್ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಂದರೆ ಎಲ್ಲರೂ ಸಂಭ್ರಮಿಸುತ್ತಿದ್ದರೆ, ಮುಝರಬಾನಿ ಇಲ್ಲಿ ಏನು ನಡೀತಿದೆ ಎಂಬ ಹಾವಭಾವದಲ್ಲೇ ಕೂತಿದ್ದರು. ಇದೀಗ ಈ ರಿಯಾಕ್ಷನ್ ವಿಡಿಯೋ ಹಾಗೂ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಅಂದಹಾಗೆ ಝಿಂಬಾಬ್ವೆಯ ಬ್ಲೆಸಿಂಗ್ ಮುಝರಾಬಿ ಆರ್ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಆಯ್ಕೆಯಾದ ಆಟಗಾರ. ಲುಂಗಿ ಎನ್ಗಿಡಿ ಆರ್ಸಿಬಿ ತಂಡವನ್ನು ತೊರೆದ ಕಾರಣ ಮುಝರಬಾನಿಯನ್ನು ಬದಲಿಯಾಗಿ ಆಯ್ಕೆ ಮಾಡಲಾಗಿದೆ. ಅದರಂತೆ ಇದೇ ಮೊದಲ ಬಾರಿ ಬ್ಲೆಸಿಂಗ್ ಮುಝರಬಾನಿ ಐಪಿಎಲ್ನಲ್ಲಿ ಕಾಣಿಸಿಕೊಂಡಿದ್ದಾರೆ.

