ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!: BMRCL ವಿರುದ್ಧ ವಿನೂತನ ಪ್ರತಿಭಟನೆ

Edited By:

Updated on: Sep 28, 2026 | 2:31 PM

Bangalore Pink Line Metro: ಬೆಂಗಳೂರಿನ ಪಿಂಕ್ ಲೈನ್ ಮೆಟ್ರೋ ಕಾಮಗಾರಿ ಆರು ನಿಲ್ದಾಣಗಳವರೆಗೆ ಪೂರ್ಣಗೊಂಡಿದ್ದರೂ, ಬಿಎಂಆರ್​ಸಿಎಲ್ ಉದ್ಘಾಟನೆಯನ್ನು ವಿಳಂಬಗೊಳಿಸಿದೆ. ರೈಲ್ವೆ ಸುರಕ್ಷತಾ ಆಯುಕ್ತರ ಅನುಮತಿಗಾಗಿ ಕಾಯುತ್ತಿದೆ. ಈ ವಿಳಂಬದಿಂದ ಬೇಸತ್ತ ಸ್ಥಳೀಯರು, ತಾವೇ ರಿಬ್ಬನ್ ಕಟ್ ಮಾಡುವ ಮೂಲಕ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದ್ದಾರೆ. ಈ ವಿನೂತನ ಪ್ರತಿಭಟನೆ ಸಾರ್ವಜನಿಕರ ಗಮನ ಸೆಳೆದಿದೆ.

ಬೆಂಗಳೂರು, ಸೆಪ್ಟೆಂಬರ್​ 28: ಪಿಂಕ್ ಲೈನ್ ಮೆಟ್ರೋ ಕಾಮಗಾರಿ ಆರು ನಿಲ್ದಾಣಗಳವರೆಗೆ ಸಂಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ. ಆದಾಗ್ಯೂ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ರೈಲ್ವೆ ಸುರಕ್ಷತಾ ಆಯುಕ್ತರ ಅನುಮತಿಗಾಗಿ ಕಾಯುತ್ತಿದೆ. ಈ ವಿಳಂಬದಿಂದಾಗಿ ಮೆಟ್ರೋ ಮಾರ್ಗವನ್ನು ಸಾರ್ವಜನಿಕ ಬಳಕೆಗೆ ತೆರೆಯುವುದು ತಡವಾಗಿದೆ. ಸತತ ವಿಳಂಬದಿಂದ ಬೇಸತ್ತ ಸ್ಥಳೀಯ ನಿವಾಸಿಗಳು ವಿಶಿಷ್ಟ ರೀತಿಯಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಅಧಿಕೃತ ಸಮಾರಂಭದ ನಿರೀಕ್ಷೆಯಿಲ್ಲದೆ, ಸ್ಥಳೀಯರೇ ಗುಲಾಬಿ ಮೆಟ್ರೋ ಮಾರ್ಗದ ರಿಬ್ಬನ್ ಕಟ್ ಮಾಡಿ, ಅದನ್ನು ಉದ್ಘಾಟಿಸಿದ್ದಾರೆ. ಈ ವಿನೂತನ ಪ್ರತಿಭಟನೆ ಸಾರ್ವಜನಿಕರ ಗಮನ ಸೆಳೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Published on: Sep 28, 2026 02:24 PM
Loading...
Unable to load recommendations.
Follow Us
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More