ಕೆಆರ್ ಮಾರುಕಟ್ಟೆ ಫ್ಲೈಓವರ್ನಲ್ಲಿ ಬಿಎಂಟಿಸಿ ಬಸ್, ಬೈಕ್ ಡಿಕ್ಕಿ: ಬೆಳ್ಳಂಬೆಳಗ್ಗೆಯೇ ಟ್ರಾಫಿಕ್ ಜಾಮ್
ಕೆಆರ್ ಮಾರ್ಕೆಟ್ ಮೇಲ್ಸೇತುವೆ ಮೇಲೆ ಪ್ರಯಾಣ ಮಾಡುವವರಿಗೆ ಶುಕ್ರವಾರ ಬೆಳಗ್ಗೆಯೇ ಟ್ರಾಫಿಕ್ ಜಾಮ್ ಬಿಸಿ ತಟ್ಟಿತು. ಬೈಕ್ ಹಾಗೂ ಬಿಎಂಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದರಿಂದ ಸ್ಥಳದಲ್ಲಿ ಸಂಚಾರ ದಟ್ಟಣೆ ಉಂಟಾಯಿತು.
ಬೆಂಗಳೂರು, ಫೆಬ್ರವರಿ 14: ಬಿಎಂಟಿಸಿ ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ಬೆಂಗಳೂರಿನ ಕೆಆರ್ ಮಾರುಕಟ್ಟೆ ಫ್ಲೈಓವರ್ನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಚಲಿಸುತ್ತಿದ್ದ ಬಿಎಂಟಿಸಿ ಬಸ್ ಅಡಿ ಒಂದು ಬೈಕ್ ಸಿಲುಕಿದ್ದು, ಇದೇ ವೇಳೆ ಮತ್ತೊಂದು ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಎರಡೂ ಬೈಕ್ಗಳಲ್ಲಿದ್ದ ಮೂವರು ಸವಾರರಿಗೆ ಗಾಯಗಳಾಗಿವೆ. ಘಟನೆ ಬಳಿಕ ಸ್ಥಳದಲ್ಲೇ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾರೆ. ಅಪಘಾತದಿಂದ ಮಾರ್ಕೆಟ್ ಫ್ಲೈಓವರ್ ಮೇಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಮೂವರು ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ