ಕೆಆರ್ ಮಾರುಕಟ್ಟೆ ಫ್ಲೈಓವರ್​ನಲ್ಲಿ ಬಿಎಂಟಿಸಿ ಬಸ್​, ಬೈಕ್ ಡಿಕ್ಕಿ: ಬೆಳ್ಳಂಬೆಳಗ್ಗೆಯೇ ಟ್ರಾಫಿಕ್ ಜಾಮ್

Updated on: Feb 14, 2025 | 8:04 AM

ಕೆಆರ್ ಮಾರ್ಕೆಟ್​​ ಮೇಲ್ಸೇತುವೆ ಮೇಲೆ ಪ್ರಯಾಣ ಮಾಡುವವರಿಗೆ ಶುಕ್ರವಾರ ಬೆಳಗ್ಗೆಯೇ ಟ್ರಾಫಿಕ್ ಜಾಮ್ ಬಿಸಿ ತಟ್ಟಿತು. ಬೈಕ್​ ಹಾಗೂ ಬಿಎಂಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದರಿಂದ ಸ್ಥಳದಲ್ಲಿ ಸಂಚಾರ ದಟ್ಟಣೆ ಉಂಟಾಯಿತು.

ಬೆಂಗಳೂರು, ಫೆಬ್ರವರಿ 14: ಬಿಎಂಟಿಸಿ ಬಸ್​ ಹಾಗೂ ಬೈಕ್ ಡಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ಬೆಂಗಳೂರಿನ ಕೆಆರ್ ಮಾರುಕಟ್ಟೆ ಫ್ಲೈಓವರ್​ನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಚಲಿಸುತ್ತಿದ್ದ ಬಿಎಂಟಿಸಿ ಬಸ್​​ ಅಡಿ ಒಂದು ಬೈಕ್​​​ ಸಿಲುಕಿದ್ದು, ಇದೇ ವೇಳೆ ಮತ್ತೊಂದು ಬೈಕ್​ ಡಿವೈಡರ್​​ಗೆ ಡಿಕ್ಕಿ ಹೊಡೆದಿದೆ. ಎರಡೂ ಬೈಕ್​ಗಳಲ್ಲಿದ್ದ ಮೂವರು ಸವಾರರಿಗೆ ಗಾಯಗಳಾಗಿವೆ. ಘಟನೆ ಬಳಿಕ ಸ್ಥಳದಲ್ಲೇ ಬಸ್​ ಬಿಟ್ಟು ಚಾಲಕ ಪರಾರಿಯಾಗಿದ್ದಾರೆ. ಅಪಘಾತದಿಂದ ಮಾರ್ಕೆಟ್​ ಫ್ಲೈಓವರ್​ ಮೇಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಮೂವರು ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More