ಲಗ್ಗೆರೆ ಬಸ್ ನಿಲ್ದಾಣದಲ್ಲಿ ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಬೆಂಗಳೂರಿನ ಲಗ್ಗೆರೆ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಒಂದು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ನಿನ್ನೆ ಸಂಜೆ 4:50ರ ಸುಮಾರಿಗೆ ಮೆಜೆಸ್ಟಿಕ್‌ನಿಂದ ಬಂದ ಬಸ್‌ನಲ್ಲಿ ಚಾಲಕ-ನಿರ್ವಾಹಕರು ಇಳಿದ ಐದು ನಿಮಿಷದಲ್ಲಿ ಎಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ, ಅಧಿಕಾರಿಗಳು, ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಅದೃಷ್ಟವಶಾತ್, ಬಸ್‌ನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೆಂಗಳೂರು, ಏಪ್ರಿಲ್ 19: ಲಗ್ಗೆರೆ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಒಂದು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ನಿನ್ನೆ ಸಂಜೆ ಸುಮಾರು 4:50ಕ್ಕೆ ಮೆಜೆಸ್ಟಿಕ್‌ನಿಂದ ಲಗ್ಗೆರೆ ಬಸ್ ನಿಲ್ದಾಣಕ್ಕೆ ಬಂದಿದ್ದ ಬಿಎಂಟಿಸಿ ಬಸ್ ನಿಲ್ಲಿಸಿದ ನಂತರ ಚಾಲಕ ಮತ್ತು ನಿರ್ವಾಹಕರು ಬಸ್ ನಿಲ್ದಾಣದೊಳಗೆ ತೆರಳಿದ್ದರು. ಅದಾಗಿ ಐದೇ ನಿಮಿಷದೊಳಗೆ ಬಸ್‌ನ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳದಲ್ಲಿದ್ದ ಅಗ್ನಿಶಾಮಕ ಸಿಬ್ಬಂದಿ, ಅಧಿಕಾರಿಗಳು, ಚಾಲಕ-ನಿರ್ವಾಹಕರು ಹಾಗೂ ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ, ಬೆಂಕಿ ಆರಿಸಲು ಸಾಧ್ಯವಾಗಲಿಲ್ಲ. ಕೇವಲ 15ರಿಂದ 20 ನಿಮಿಷಗಳಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಘಟನೆ ನಡೆದ ಸಮಯದಲ್ಲಿ ಬಸ್‌ನಲ್ಲಿ ಯಾವುದೇ ಪ್ರಯಾಣಿಕರು ಇರದ ಕಾರಣ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Apr 19, 2026 07:01 AM
Follow Us